ವಾಯುಭಾರ ಕುಸಿತ: ಮಲೆನಾಡು-ಕರಾವಳಿಯಲ್ಲಿ ಮಳೆ ಸಂಭವ

 

ವಿಜಯ ಸಂಘರ್ಷ



ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಕೊಡಗು, ರಾಮನಗರ, ಮೈಸೂರು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಇಲಾಖೆ ವರದಿ ಹೇಳಿದೆ.

ಇಂದು ಮತ್ತು ನಾಳೆ ಕರಾವಳಿ, ಮಲೆನಾಡಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು