ವಿಜಯ ಸಂಘರ್ಷ
ಬೆಂಗಳೂರು: ಜಾನಪದ ಕಲೆಯ ಉಳಿವಿಗೆ ಕರ್ನಾಟಕ ದೊಡ್ಡ ಕೊಡುಗೆ ನೀಡಿದೆ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ತಿಳಿಸಿದ್ದಾರೆ.
ಸಮಾಜದಲ್ಲಿನ ಜನಪದ ಕಲೆಗಳ ಮಹತ್ವ ಕುರಿತು ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು, ವಿಶ್ವದಲ್ಲೇ ಮೊದಲ ಜಾನಪದ ವಿಶ್ವವಿದ್ಯಾಲವನ್ನು ಸ್ಥಾಪನೆ ಮಾಡಿದ ಕೀರ್ತಿ ರಾಜ್ಯಕ್ಕೆ ಸಲ್ಲುತ್ತದೆ. ಅಪರೂಪದ ಕಲೆ ನಶಿಸಿ ಹೋಗದಂತೆ ಅದನ್ನು ಉಳಿಸಿ, ಬೆಳೆಸುವ ಜವಾಬ್ದಾರಿಯನ್ನು ಎಲ್ಲರೂ ತೆಗೆದುಕೊಳ್ಳಬೇಕು ಎಂದರು.
ಬದಲಾದ ಕಾಲಘಟ್ಟದಲ್ಲಿ ಜಾನಪದ ಕಲೆಗಳು ಮಹತ್ವ ಕಳೆದುಕೊಳ್ಳುತ್ತವೆ. ಈ ವೃತ್ತಿಯಲ್ಲಿ ತೊಡಗಿದ್ದ ಬಹುತೇಕ ಯುವಕ-ಯುವತಿಯರು ಹಳ್ಳಿಗಳನ್ನು ತೊರೆದು ಪಟ್ಟಣ ಸೇರುತ್ತಿದ್ದಾರೆ. ಇದರಿಂದಾಗಿ ಹಿಂದಿನ ವೈಭವ ಮರೆಯಾಗುತ್ತಿದೆ. ಇದು ಬೇಸರದ ಸಂಗತಿ ಎಂದು ಉಪರಾಷ್ಟ್ರಪತಿ ವಿಷಾದ ವ್ಯಕ್ತಪಡಿಸಿದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795