ವಿಜಯ ಸಂಘರ್ಷ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರ ನಿರ್ದೇಶನದಂತೆ, ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳ ಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭ ಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದೆಂದು ನಿರ್ದೇಶಿಸಿ, ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದೆಂದು ಆದೇಶಿಸಲಾಗಿದೆ.
ಈ ನಿರ್ದೇಶನವನ್ನು ಚಾಚು ತಪ್ಪದೇ ಅನುಷ್ಟಾನಗೊಳಿಸಲು ಸಂಬಂಧಪಟ್ಟ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೊಳಪಡುವ ಎಲ್ಲಾ ಸಂಸ್ಥೆಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಅಧಿಕಾರಿಗಳಿಗೆ ಸೂಚಿಸು ವಂತೆ ಸಿಎಂ ಬೊಮ್ಮಾಯಿ ಆದೇಶ ಜಾರಿ ಮಾಡಿದ್ದಾರೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795