ವಿಜಯ ಸಂಘರ್ಷ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬರುವ ಮಂಗಳವಾರದವರೆಗೂ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿಯಲಿದೆ. ಆ :23 ಮತ್ತು 24ರಂದು ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ಮುನ್ಸೂಚನೆಗಳಿವೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆ ಮುಂದುವರಿಯಲಿದೆ. ದಕ್ಷಿಣ , ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿದೆ. ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795