ವಿಜಯ ಸಂಘರ್ಷ
ಭದ್ರಾವತಿ: ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡು ಕೊಳ್ಳಬೇಕಾದರೆ ಪ್ರತಿಯೊಬ್ಬರೂ ಧರ್ಮ ಮಾರ್ಗದಲ್ಲಿ ಸಾಗುವುದು ಅನಿವಾರ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಅವರು ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ಜನ್ಮ ಸುವರ್ಣ ಮಹೋತ್ಸವ ಹಾಗು ಸುವರ್ಣ ಭವನ ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದರು.
ಸಮಾಜದಲ್ಲಿ ನೂರಾರು ಸಮಸ್ಯೆ ಗಳಿದ್ದು, ಈ ನಡುವೆಯೂ ಮಠಮಂದಿರಗಳು ಸಮಾಜದ ಏಳಿಗೆಗಾಗಿ ಶ್ರಮಿಸುವ ಜೊತೆಗೆ ಉತ್ತಮ ಧರ್ಮ ಸಂಸ್ಕಾರ ನೀಡುತ್ತಿವೆ. ಧರ್ಮ ಮಾರ್ಗದಲ್ಲಿ ಸಾಗಿದರೆ ಮಾತ್ರ ಎಲ್ಲದಕ್ಕೂ ಪರಿಹಾರ ಕೊಂಡುಕೊಳ್ಳ ಬಹುದಾಗಿದೆ ಎಂದರು.
ಬಿಳಿಕಿ ಶಾಖಾ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪೀಠಾಧಿಪತಿಯಾಗಿ 31 ವರ್ಷಗಳು ಕಳೆದಿವೆ. ಯಾವುದೇ ಆದಾಯ ವಿಲ್ಲದಿದ್ದರೂ ಸಹ ಕೇವಲ ಅಂಚಿನ ಮನೆಯಲ್ಲಿದ್ದ ಮಠ ಇಂದು ಬೃಹದಾಗಿ ಬೆಳೆದಿದೆ. ಸಮಾಜದ ಪ್ರತಿಯೊಬ್ಬರು ಮಠದ ಬೆಳವಣಿಗೆಗೆ ಕಾರಣಕರ್ತ ರಾಗಿದ್ದಾರೆ. ಮಠವಿದ್ದರೆ ಸಮಾಜ, ಸಮಾಜವಿದ್ದರೆ ಮಠ ಎಂಬುದು ಈ ಮೂಲಕ ಸಾಬೀತು ಮಾಡಿ ತೋರಿಸ ಲಾಗಿದೆ ಎಂದರು.
ದಿವ್ಯ ಸಾನಿಧ್ಯವಹಿಸಿದ್ದ ಶಿವಮೊಗ್ಗ ಆನಂದಪುರ ಶ್ರೀ ಬೆಕ್ಕಿನಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ಮಾತನಾಡಿ, ಮನೆಗೂ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಮಠಗಳು ಸಮಾಜ ಮುಖಿಯಾಗಿರಬೇಕು. ಸರ್ಕಾರ ಮಾಡುವ ಕೆಲಸಗಳನ್ನು ಮಠಮಂದಿರ ಗಳು ಮಾಡುತ್ತಿವೆ. ಈ ಹಿನ್ನಲೆಯಲ್ಲಿ ಮಠಮಂದಿರಗಳು ಸಹ ಬೆಳವಣಿಗೆ ಹೊಂದಬೇಕು. ಇವುಗಳನ್ನು ಉಳಿಸಿ ಕೊಳ್ಳುವ ಜವಾಬ್ದಾರಿ ಸಮಾಜದ ಪ್ರತಿಯೊಬ್ಬರದ್ದಾಗಿದೆ ಎಂದರು.
ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಜ್ಞಾನದ ಜೊತೆಗೆ ಉತ್ತಮ ಸಂಸ್ಕಾರ ಅವಶ್ಯಕವಾಗಿದೆ. ಮಠ ಮಂದಿರಗಳು ಪ್ರತಿಯೊಬ್ಬರಿಗೂ ಉತ್ತಮ ಸಂಸ್ಕಾರ ನೀಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ. ಮಾನವ ಕುಲದ ಕಲ್ಯಾಣಕ್ಕಾಗಿ ಶ್ರಮಿಸುತ್ತಿವೆ. ಆದರೆ ಸಮಾಜದಲ್ಲಿ ಕೆಲವರು ಧರ್ಮದ ಹೆಸರಿನಲ್ಲಿ ಅಪಪ್ರಚಾರ ನಡೆಸುತ್ತಿರುವುದು ವಿಷಾದನೀಯ ಬೆಳವಣಿಗೆಯಾಗಿದೆ ಎಂದರು.
ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಶ್ರೀ ಜ್ಞಾನಪ್ರಭು ಸಿದ್ದರಾಮ ರಾಜದೇಶೀಕೇಂದ್ರ ಸ್ವಾಮೀಜಿ, ಶ್ರೀ ವಿರೂಪಾಕ್ಷ ಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ಮಹಾಂತ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ಗುದ್ದಲೀಶ್ವರ ಸ್ವಾಮೀಜಿ, ಡಾ. ಶ್ರೀ ಮಹಾಂತ ಸ್ವಾಮೀಜಿ, ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ಶ್ರೀ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಶ್ರೀ ಚನ್ನವೀರ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಮರುಳಸಿದ್ದ ಶಿವಾಚಾರ್ಯ ಸ್ವಾಮೀಜಿ, ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಡಾ. ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಡಾ. ಶ್ರೀ ಬಸವಜಯಚಂದ್ರ ಸ್ವಾಮೀಜಿ, ಶ್ರೀ ಶಶಿಶೇಖರ ಸಿದ್ದಬಸವ ಸ್ವಾಮೀಜಿ ಮತ್ತು ಶ್ರೀ ಮರುಳಸಿದ್ದ ಪಂಡಿತಾರಾಧ್ಯ ಸ್ವಾಮೀಜಿ ಉಪಸ್ಥಿತರಿರುವರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ ಕಾಂತೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ, ಹಿರೇಮಠದ ಗೌರವಾಧ್ಯಕ್ಷ ಟಿ.ವಿ ಈಶ್ವರಯ್ಯ, ವಿವಿಧ ಸಮಾಜದ ಮುಖಂಡರಾದ ಮನೋಹರ್ ಅಬ್ಲಿಗೆರೆ, ಸಿದ್ದಲಿಂಗಯ್ಯ, ಪಾಪಿಬಾಯಿ, ಬಿ.ಎಂ. ಸಂತೋಷ್, ಯಶವಂತರಾವ್ ಘೋರ್ಪಡೆ, ಎ. ಮಾಧು, ಬಿ.ಟಿ ನಾಗರಾಜ್, ಎಂ.ಎಸ್ ಜನಾರ್ಧನ ಅಯ್ಯಂಗಾರ್, ಎ.ಟಿ ರವಿ, ನಂದಿ ಮಲ್ಲಿಕಾರ್ಜುನ, ಡಾ.ಜಿ.ಎಂ ನಟರಾಜ್, ಪ್ರಶಾಂತ್, ಸಿದ್ದಬಸಪ್ಪ, ಎಂ.ಎಸ್ ಬಸವರಾಜ್, ವಸಂತ್, ಮಂಜುನಾಥ್ ಇನ್ನಿತರರು ಉಪಸ್ಥಿತರಿದ್ದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795