ಮೊಬೈಲ್ ಫೇಸ್ ಬುಕ್, ವ್ಯಾಟ್ಸಫ್ ಪಕ್ಕಕ್ಕಿಡಿ ಓದಿನೆಡೆ ಗಮನಕೊಡಿ: ಜಯರಾಂ ಕರೆ

 

ವಿಜಯ ಸಂಘರ್ಷ



ಕೆ.ಆರ್. ಪೇಟೆ: ಯುವಜನರು ಹಾಗೂ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಗುರಿಸಾಧನೆಯತ್ತ ಹೆಜ್ಜೆಹಾಕಬೇಕು ಎಂದು  ರಾಜ್ಯ ಯುವಜನ ತರಬೇತುದಾರ ವಿಠಲಾಪುರ ಜಯರಾಂ ಕರೆ ನೀಡಿದರು.

ಅವರು ಇಂದು ಪಟ್ಟಣದ ಕಲ್ಪತರು ಪ್ರಥಮದರ್ಜೆ ಕಾಲೇಜಿನಲ್ಲಿ ನೂತನವಾಗಿ ಆರಂಭವಾದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯುವಜನರು ಪಠ್ಯ ಚಟುವಟಿಕೆಗಳ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳ ಕಲಿಕೆಗೆ ಒತ್ತು ನೀಡಿ ಪುಸ್ತಕ ಹಾಗೂ ಪತ್ರಿಕೆಗಳನ್ನು ಓದಿ ಮನನ ಮಾಡಿಕೊಳ್ಳುವ ಮೂಲಕ  ಜ್ಞಾನವನ್ನು ಹೆಚ್ಚಿಸಿಕೊಂಡು ಸಾಧನೆ ಮಾಡಬೇಕು. ಜಾಗತಿಕ ಜಗತ್ತಿನ ಇಂದಿನ ಸ್ಪರ್ಧಾ ಪ್ರಪಂಚದಲ್ಲಿಂದು  ಸರ್ಕಾರಿ ಕೆಲಸ ಪಡೆಯಬೇಕಾದರೆ ಏಕಾಗ್ರತೆ ಹಾಗೂ ಶ್ರದ್ಧೆಯಿಂದ ಅಭ್ಯಾಸ ಮಾಡಿ ಸ್ಪರ್ಧೆಯನ್ನು ಎದುರಿಸಿ ಸಾಧನೆಯನ್ನು ಮಾಡಬೇಕಾಗಿ ರುವುದರಿಂದ ಮೊಬೈಲ್ ಫೇಸ್ ಬುಕ್, ವ್ಯಾಟ್ಸಫ್, ವಿಡಿಯೋ ಗೇಮ್ ಎಂದು ತಮ್ಮ ಅಮೂಲ್ಯವಾದ ಸಮಯವನ್ನು ಹಾಳುಮಾಡಿಕೊಳ್ಳದೇ ಏಕಾಗ್ರತೆ ಯಿಂದ ಇಷ್ಟಪಟ್ಟು ಅಭ್ಯಾಸ ಮಾಡಿ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿ ಮುನ್ನಡೆಯಬೇಕು ಎಂದು ವಿಧ್ಯಾರ್ಥಿಗಳಿಗೆ ಕರೆ ನೀಡಿದರು..

ಎಸ್.ಎಂ.ಲಿಂಗಪ್ಪ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಸುರೇಶ್ ಕಾರ್ಯಕ್ರಮಕ್ಕೆ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ,  ಮಾತನಾಡಿ ಯುವಜನರು ಸಾಧಿಸುವ ಛಲವನ್ನು ಮೈಗೂಡಿಸಿಕೊಂಡು ಮೊಬೈಲ್ ಹುಳುಗಳಾಗದೇ ಪುಸ್ತಕದ ಹುಳುಗಳಾಗಿ ತಲೆತಗ್ಗಿಸಿ ಅಭ್ಯಾಸ ಮಾಡಿ ಜೀವನದಲ್ಲಿ ಸರ್ವಶ್ರೇಷ್ಠ ಸಾಧನೆ ಮಾಡಬೇಕು ಎಂದರು..

ಕೆಪಿಎಸ್ ಸ್ಕೂಲ್ ಪ್ರಾಂಶುಪಾಲ ಡಿ.ಬಿ.ಸತ್ಯ, ಸಾಹಿತಿ ಹಾಗೂ ಉಪನ್ಯಾಸಕ ಬಲ್ಲೇನಹಳ್ಳಿ ಮಂಜುನಾಥ್, ಸಂತೇಬಾಚಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಮಂಜುನಾಥ್, ಸರ್ಕಾರಿ ಪ್ರಥಮದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕ ಮನಶಾಸ್ತ್ರಜ್ಞ ಬಸವಲಿಂಗಪ್ಪ, ರಾಜ್ಯ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ವರದಿಗಾರರ ಸಂಘದ ಅಧ್ಯಕ್ಷ ಡಾ.ಕೆ.ಆರ್.ನೀಲಕಂಠ  ಮಾತನಾಡಿದರು..
ಉಪನ್ಯಾಸಕ ಮಹೇಶ್ ಸ್ವಾಗತಿಸಿದರು.

ವರದಿ: ಸಿ.ಆರ್. ಜಗದೀಶ್, ಕೆ.ಆರ್. ಪೇಟೆ,

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು