ಕೋವಿಡ್-19 ಲಸಿಕಾ ಅಭಿಯಾನ ನಾಳೆ

 

ವಿಜಯ ಸಂಘರ್ಷ



ಭದ್ರಾವತಿ: ಕೋವಿಡ್-19 ಸೋಂಕು ನಿರ್ಮೂಲನೆಗಾಗಿ ಕೈಗೊಂಡಿರುವ ಲಸಿಕಾ ಅಭಿಯಾನ ಚುರುಕು ಗೊಳಿಸಲು ತಾಲೂಕು ಆಡಳಿತ, ನಗರಸಭೆ ಹಾಗು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಸೆ.17 ರ ನಾಳೆ  ಉಚಿತ ಲಸಿಕಾ ಮಹಾಮೇಳ ಹಮ್ಮಿಕೊಳ್ಳಲಾಗಿದೆ.

ತಾಲೂಕಿನಲ್ಲಿ ಒಂದೇ ದಿನ ಸುಮಾರು 16 ಸಾವಿರ ಮಂದಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು  ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ತಿಳಿಸಿದ್ದಾರೆ.

ತಾಲೂಕಿನಲ್ಲಿ ಇದುವರೆಗೂ ಒಟ್ಟು 1, 10, 448 ಮಂದಿ ಮೊದಲ ಹಂತದ ಲಸಿಕೆ ಹಾಗು 35, 220 ಮಂದಿ ಎರಡನೇ ಹಂತದ ಲಸಿಕೆ ಪಡೆದು ಕೊಂಡಿದ್ದಾರೆ. ಇನ್ನೂ ಹೆಚ್ಚಿನ ಮಂದಿ ಲಸಿಕೆ ಪಡೆದುಕೊಳ್ಳಬೇಕಾಗಿದೆ. ಈ ನಡುವೆ ಉಚಿತ ಲಸಿಕಾ ಮಹಾಮೇಳದ ಹಿನ್ನಲೆಯಲ್ಲಿ ಒಂದೇ ದಿನ 16 ಸಾವಿರ ಮಂದಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದರು.

ಲಸಿಕೆ ಪಡೆಯಲು ಅರ್ಹತೆ ಹೊಂದಿರುವ 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಲಸಿಕಾ ಕೇಂದ್ರಗಳಿಗೆ ತೆರಳಿ ಲಸಿಕೆ ಪಡೆಯಬಹುದಾಗಿದೆ. ಬೆಳಿಗ್ಗೆ 7 ಗಂಟೆಯಿಂದ 7 ಗಂಟೆವರೆಗೂ ಲಸಿಕಾ ಮಹಾಮೇಳ ನಡೆಯಲಿದೆ. ವಿದ್ಯಾರ್ತಿಗಳಾದಿಯಾಗಿ ಎಲ್ಲರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು