ವಾರ್ಡ್ ನಂ.29 ರ ನಗರಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದೇ ಕೊನೆ.?

 

ವಿಜಯ ಸಂಘರ್ಷ



ಭದ್ರಾವತಿ: ನಗರಸಭೆ ವಾರ್ಡ್ ನಂ.29 ರ ಚುನಾವಣೆ ಪ್ರಚಾರದ ಭರಾಟೆ ಹೆಚ್ಚಾಗಿದ್ದು, ಬಿಜೆಪಿ ಅಭ್ಯರ್ಥಿ ರಮಾ ವೆಂಕಟೇಶ್ ಪರವಾಗಿ ಜಿಲ್ಲಾ ಹಾಗು ಸ್ಥಳೀಯ ಮುಖಂಡರು ಮನೆ ಮನೆಗೆ ತೆರಳಿ ವ್ಯಾಪಕ ಪ್ರಚಾರ ನಡೆಸಿದರು.

ಬಹಿರಂಗ ಪ್ರಚಾರಕ್ಕೆ ತೆರೆಬಿದಿದ್ದು ಈ ಹಿನ್ನಲೆಯಲ್ಲಿ ವಿವಿಧ ಪಕ್ಷಗಳ ಮುಖಂಡರು ತಮ್ಮ ಅಭ್ಯರ್ಥಿಗಳ ಪರ ಮನೆ ಮನೆ ಪ್ರಚಾರಕ್ಕೆ ಮುಂದಾ ಗಿದ್ದಾರೆ.

 ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜಿ. ಧರ್ಮಪ್ರಸಾದ್, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಆರ್.ಎಸ್ ಶೋಭಾ, ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಪ್ರಧಾನ ಕಾರ್ಯದರ್ಶಿ ಚನ್ನೇಶ್, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್, ಯುವ ಘಟಕದ ಅಧ್ಯಕ್ಷ ವಿಜಯರಾ ಜ್, ಸೂಡಾ ಸದಸ್ಯರಾದ ವಿ. ಕದಿರೇಶ್, ರಾಮಲಿಂಗಯ್ಯ, ಭೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ಜಿ. ಆನಂದ ಕುಮಾರ್, ಹಟ್ಟಿ ಚಿನ್ನದ ಗಣಿ ಕಂಪನಿ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್, ಜನ್ನಾಪುರ ಶಕ್ತಿ ಕೇಂದ್ರದ ಅಧ್ಯಕ್ಷ ನವೀನ್ ಕುಮಾರ್, ಎಂ. ಮಂಜುನಾಥ್, ಶಿವಕುಮಾರ್, ಮಣಿ, ಮಂಜಪ್ಪ, ನಂಜಪ್ಪ, ಹೇಮಾವತಿ ವಿಶ್ವನಾಥ್, ಮಂಜುಳ, ಮಲ್ಲೇಶ್ ಸೇರಿದಂತೆ ಇನ್ನಿತರರಿದ್ದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು