ವಿಜಯ ಸಂಘರ್ಷ
ನವದೆಹಲಿ: ಸಿಎಂ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರ ಈ ವರ್ಷವೂ ದೀಪಾವಳಿಗೆ ಪಟಾಕಿ ಬಳಕೆ, ಮಾರಾಟಕ್ಕೆ ನಿಷೇಧ ಹೇರಿದೆ.
ವಾಯು ಮಾಲಿನ್ಯ ಗಮನದಲ್ಲಿಟ್ಟು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ವರ್ಷವೂ ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅರವಿಂದ ಕೇಜ್ರಿವಾಲ್, ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ಗಮನದ ಲ್ಲಿಟ್ಟುಕೊಂಡು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕಳೆದ ವರ್ಷದಂತೆಯೇ ಈ ವರ್ಷವೂ ಪಟಾಕಿಗಳ ಶೇಖರಣೆ, ಮಾರಾಟ ಹಾಗೂ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795