ಮಹಿಳೆಯರ ಮೇಲಿನ ಅತ್ಯಾಚಾರ ಖಂಡಿಸಿ ಎರಡು ಪ್ರತ್ಯೇಕ ಪ್ರತಿಭಟನೆ

 

ವಿಜಯ ಸಂಘರ್ಷ 



ಭದ್ರಾವತಿ: ದೇಶಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ಸೋಮವಾರ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ರಂಗಪ್ಪ ವೃತ್ತದಿಂದ ತಾಲೂಕು ಕಛೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಮಾತನಾಡಿದ ಮುಖಂಡರು, ದೆಹಲಿಯ ಜಿಲ್ಲಾ ಮಹಿಳಾ ಸಿವಿಲ್ ಡಿಫೆನ್ಸ್ ಅಧಿಕಾರಿ ರಾಬೀಯಾ ಸೈಫಿ ಅವರನ್ನು ಆ.26 ರಂದು ಅತ್ಯಾಚಾರ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿದೆ. ಈ ಕೊಲೆಗೆ ಮ್ಯಾಜಿಸ್ಟ್ರೇಟ್ ಕಛೇರಿಯಲ್ಲಿನ ಭ್ರಷ್ಟಾಚಾರವೇ ಕಾರಣ ಎಂದು ಆಕೆಯ ಕುಟಂಬಸ್ಥರು ಆರೋಪಿಸುತ್ತಿದ್ದಾರೆ. ಆದರೆ ಪೊಲೀಸರು ಕುಟುಂಬಸ್ಥರ ಹೇಳಿಕೆಗಳನ್ನು ದಾಖಲಿಸಿಕೊಳ್ಳದೆ ಕೇವಲ ಆಕೆಯ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿಯ ಹೇಳಿಕೆ ಮಾತ್ರ ದಾಖಲಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಯಿತು.



ಕಳೆದ ವಾರ ದೆಹಲಿ ಸರ್ಕಾರದಲ್ಲಿ ಸಿವಿಲ್ ಡಿಫೆನ್ಸ್ ಅಧಿಕಾರಿ ರಾಬಿಯಾ ಸೈಫಿ, ಮೈಸೂರಿನ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ, ಮುಂಬೈ ನಲ್ಲೂ ಅತ್ಯಾಚಾರ ಹೀಗೆ ದೇಶಾದ್ಯಂತ ಮಹಿಳೆಯರ ಮೇಲೆ ನಿರಂತರ  ಕೊಲೆ ನಡೆಯುತ್ತಿರುವುದು ಅವಮಾನಿಯಾ. ಈ ಕೂಡಲೇ ರಾಷ್ಟ್ರಪತಿಗಳು ಗಮನ ಹರಿಸಿ ಕಾನೂನು ಬಿಗಿಗೊಳಿಸಿ ಅತ್ಯಾ ಚಾರಿಗಳಿಗೆ ಗಲ್ಲಿಗೇರಿಸುವಂತೆ ಒತ್ತಾಯಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಅಧಿಕಾರಿಗಳು ಹಾಗು ಪೊಲೀಸರ ನಿರ್ಲಕ್ಷ್ಯತನ ಸರಿಯಲ್ಲ. ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆ ಯಾಗುತ್ತಿದ್ದು, ಜೊತೆಗೆ ಇಂತಹ  ಕೃತ್ಯಗಳು ನಡೆಯಲು ಪ್ರಚೋದನೆ ನೀಡಿದಂತಾಗುತ್ತಿದೆ. ಮಹಿಳೆಯರಿಗೆ ಗೌರವಯುತವಾಗಿ, ಸುರಕ್ಷಿತವಾಗಿ ಬದುಕಲು ಸಾಧ್ಯವಿಲ್ಲದಂತಾಗಿದೆ. ಈ ಹಿನ್ನಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿ ದಂತೆ ವಿಶೇಷ ತನಿಖಾ ತಂಡ ರಚಿಸಿ, ಕೊಲೆಯ ಹಿಂದಿನ ರಹಸ್ಯ ಭೇದಿಸು ವಂತೆ ಆಗ್ರಹಿಸಲಾಯಿತು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಲಾಯಿತು.

ಎಸ್‌ಡಿಪಿಐ ಶಿವಮೊಗ್ಗ ಜಿಲ್ಲಾಧ್ಯಕ್ಷ ಇಮ್ರಾನ್, ತಾಲೂಕು ಅಧ್ಯಕ್ಷ ಮಹಮದ್ ತಾಹೀರ್, ಪದಾಧಿಕಾರಿಗಳಾದ  ಮಹಮದ್ ಗೌಸ್, ದೇವೇಂದ್ರ ಪಾಟೀಲ್, ಅಬ್ದುಲ್ ಮತೀನ್, ಅರ್ಷದ್ ಖುರೇಶ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಅಧ್ಯಕ್ಷ ಸಾದಿಕ್ ಉಲ್ಲಾ, ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಸಂಚಾಲಕ ಸುರೇಶ್, ಜಿ. ರಾಜು, ದಲಿತ ಮುಖಂಡ ಚಿನ್ನಯ್ಯ, ನಗರಸಭೆ ಮಾಜಿ ಸದಸ್ಯ ಮುರ್ತುಜಾಖಾನ್, ಎಎಪಿ ಮುಖಂಡರಾದ ಎಚ್. ರವಿಕುಮಾರ್, ಎ. ಮಸ್ತಾನ್, ಪರಮೇಶ್ವರಚಾರ್, ಇಬ್ರಾಹಿಂ ಖಾನ್, ಜಾವೀದ್, ಬಾಬಾಜಾನ್, ಮುಖಂಡರಾದ ಎಂ. ರವಿಕುಮಾರ್, ಮುರುಳಿ ಕೃಷ್ಣ, ಜಗದೀಶ್, ಜಹೀರ್‌ಜಾನ್ ಮತ್ತಿತರರು  ಪಾಲ್ಗೊಂಡಿದ್ದರು.

ಭದ್ರಾವತಿ : ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ - ಕೊಲೆ ಪ್ರಕರಣಗಳನ್ನು ಖಂಡಿಸಿ ಎಸ್ ಡಿಪಿಐ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮಿನಿ ವಿಧಾನ ಸೌಧ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು