ವಿಜಯ ಸಂಘರ್ಷ
ಭದ್ರಾವತಿ: ತಾಲೂಕಿನಾದ್ಯಂತ ನಡೆದ ಉಚಿತ ಲಸಿಕಾ ಮಹಾಮೇಳ ನಿರೀಕ್ಷೆ ಗೂ ಮೀರಿ ಲಸಿಕೆ ಹಾಕಲಾಗಿದ್ದು, ಜಿಲ್ಲೆ ಯಲ್ಲಿ 2 ನೇ ಸ್ಥಾನಕಾಯ್ದು ಕೊಂಡಿದೆ.
ತಾಲೂಕು ಆಡಳಿತ, ನಗರಸಭೆ ಹಾಗು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಗರ ಸಭೆ 35 ವಾರ್ಡ್‌ಗಳ ವ್ಯಾಪ್ತಿ ಯಲ್ಲಿ ಹಾಗು ಎಲ್ಲಾ ಗ್ರಾಮ ಪಂಚಾಯಿತಿ ಗಳಲ್ಲಿ ಲಸಿಕೆ ಹಾಕಲಾಯಿತು. ಲಸಿಕಾ ಮಹಾಮೇಳಕ್ಕೆ ಬೆಳಿಗ್ಗೆ 7 ಗಂಟೆಯಿಂದ ಲೇ ಚಾಲನೆ ನೀಡಲಾಯಿತು.
ಲಸಿಕೆ ಪಡೆಯಲು ಜನರು ನಿರೀಕ್ಷೆಗೂ ಮೀರಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರುವುದು ಕಂಡು ಬಂದಿತು. ಈ ಕುರಿತು ಮಾಹಿತಿ ನೀಡಿದ ತಾಲೂಕು ಆರೋಗ್ಯಾ ಧಿಕಾರಿ ಡಾ. ಎಂ.ವಿ ಅಶೋಕ್, ಒಟ್ಟು 16 ಸಾವಿರ ಮಂದಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು. ಇನ್ನೂ ಹೆಚ್ಚಿನ ಲಸಿಕೆ ಲಭ್ಯವಾದ ಹಿನ್ನಲೆಯಲ್ಲಿ 19, 465 ಮಂದಿಗೆ ಲಸಿಕೆ ಹಾಕಲಾಯಿತು. ಎಲ್ಲಾ ಲಸಿಕೆ ಕೇಂದ್ರಗಳಲ್ಲಿ ಅಗತ್ಯವಿರು ವಷ್ಟು ಸಿಬ್ಬಂದಿಗಳನ್ನು ನಿಯೋಜನೆ ಮಾಡುವ ಮೂಲಕ ತ್ವರಿತಗತಿಯಲ್ಲಿ ನಿರೀಕ್ಷೆಗೂ ಮೀರಿ ಗುರಿ ಸಾಧಿಸಲಾಗಿದೆ. ಜಿಲ್ಲೆಯಲ್ಲಿ 2ನೇ ಸ್ಥಾನ ಕಾಯ್ದುಕೊಂಡಿದೆ ಎಂದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795