ವಿಜಯ ಸಂಘರ್ಷ
ಭದ್ರಾವತಿ:ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಪ್ರಥಮ ವರ್ಷದ ಪುಣ್ಯ ಸ್ಮರಣೆಯನ್ನು ತಮ್ಮ ಮನೆಯ ಕಾರ್ಯದಂತೆ ಮಾಡಲಾಗುತ್ತಿದ್ದು, ರಾಜಕೀಯ ಬೇಧಭಾವವಿಲ್ಲದೆ ಕ್ಷೇತ್ರದ ಎಲ್ಲರೂ ಪಾಲ್ಗೊಳ್ಳಬೇಕೆಂದು ಎಂದು ಶಾರದ ಅಪ್ಪಾಜಿ ತಿಳಿಸಿದರು.
ಅವರು ಗುರುವಾರ ಖಾಸಗೀ ಹೋಟೆಲ್ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ತಾಲೂಕಿನ ಗೋಣಿಬೀಡು ಶಾಲಾ ಆವರಣದಲ್ಲಿ ಸೆ.21 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಅಪ್ಪಾಜಿ ರವರ ಪ್ರತಿಮೆ ಅನಾವರಣ ಹಮ್ಮಿಕೊಳ್ಳಲಾಗಿದೆ.
ಅಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬರುವ ನಿರೀಕ್ಷೆ ಇದೆ. ಎಲ್ಲಾ ರಾಜಕೀಯ ಪಕ್ಷದವರನ್ನು ಪುಣ್ಯ ಸ್ಮರಣಾ ಕಾರ್ಯಕ್ಕೆ ಆಹ್ವಾನಿಸಲಾಗಿದೆ. ಎಲ್ಲರೂ ಒಗ್ಗೂಡಿ ಪುಣ್ಯಸ್ಮರಣೆ ಕಾರ್ಯವನ್ನು ಯಶಸ್ವಿಗೊಳಿಸುವ ಮೂಲಕ ಎಂ.ಜೆ. ಅಪ್ಪಾಜಿ ಅವರ ಆತ್ಮಕ್ಕೆ ಶಾಂತಿ ಕೋರಬೇಕೆಂದು ಮನವಿ ಮಾಡಿದರು.
ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ ಮಾತನಾಡಿ, ಕ್ಷೇತ್ರದಲ್ಲಿ ಬಡ ವರ್ಗದವರ ಧ್ವನಿಯಾಗಿ ಮಾತ್ರವಲ್ಲದೆ ಎಲ್ಲಾ ಧರ್ಮದ, ಜನಾಂಗದವರ ಪರವಾಗಿದ್ದ ಎಂ.ಜೆ. ಅಪ್ಪಾಜಿ ರವರು ಕ್ಷೇತ್ರದಲ್ಲಿ ಕೈಗೊಂಡಿ ರುವ ಅಭಿವೃದ್ಧಿ ಕಾರ್ಯಗಳು, ಅವರಲ್ಲಿನ ರಾಜಕೀಯ ಬದ್ದತೆಗೆ ಸಾಕ್ಷಿಯಾಗಿವೆ. ಅಧಿಕಾರ ಇರಲಿ, ಇಲ್ಲದಿರಲಿ ಎಲ್ಲಾ ಸಮಯದಲ್ಲೂ ಸಾರ್ವಜನಿಕರ ಸಂಕಷ್ಟಗಳಿಗೆ ಸ್ಪಂದಿಸು ತ್ತಿದ್ದರು. ಇಂತಹ ಧೀಮಂತ ನಾಯಕನ ಪುಣ್ಯ ಸ್ಮರಣೆಯನ್ನು ಎಲ್ಲರೂ ಒಗ್ಗೂಡಿ ಅವರ ಕಾರ್ಯಕ್ರಮವನ್ನು ಅವಿಸ್ಮ ರಣೀಯವಾಗಿಸಬೇಕಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಸ್. ಕುಮಾರ್, ಜೆ.ಪಿ ಯೋಗೇಶ್, ಎಸ್. ಮಣಿಶೇಖರ್, ನಗರಸಭಾ ಸದಸ್ಯರಾದ ಬಸವರಾಜ ಆನೇಕೊಪ್ಪ, ಉದಯಕುಮಾರ್ ಮಾಜಿ ಸದಸ್ಯರಾದ ಮೈಲಾರಪ್ಪ, ಎಂ. ರಾಜು, ತಾಪಂ ಮಾಜಿ ಸದಸ್ಯ ನಂಜುಂಡೇಗೌಡ ಮುಖಂಡರಾದ ಟಿ.ಡಿ ಶ್ರೀಧರ್, ಕರಿಯಪ್ಪ, ಲೋಕೇಶ್ವರ ರಾವ್, ಡಾರ್ವಿನ್ , ಫೀರ್ಷರೀಫ್, ದಿಲೀಪ್, ಕುಮಾರ್ ಮತ್ತಿತರರು ಗೋಷ್ಠಿಯಲ್ಲಿದ್ದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795