ನಾನಾ ಸಂಘಟನೆಗಳ ಪ್ರತಿಭಟನೆ: ಭಾರತ್ ಬಂದ್ ಭದ್ರಾವತಿಯಲ್ಲಿ ನೀರಸ ಪ್ರತಿಕ್ರಿಯೆ:

 

ವಿಜಯ ಸಂಘರ್ಷ



ಭದ್ರಾವತಿ: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಮತ್ತು ಸರಕಾರಿ ಸ್ವಾಮ್ಯದ ಕಂಪನಿಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಕೇಂದ್ರ ಸರಕಾರದ ನೀತಿಯನ್ನು ಖಂಡಿಸಿ ಸೋಮವಾರ  ರೈತ ಸಂಯುಕ್ತ ಕಿಸಾನ್ ಮೋರ್ಚಾ ದೇಶವ್ಯಾಪಿ ಬಂದ್ ಗೆ ಕರೆ ನೀಡಿದ್ದು, ನಾನಾ ಸಂಘಟನೆಗಳ ನೇತೃತ್ವದಲ್ಲಿ ಬಂದ್ ನಡೆಸಿತು.

ಅನೇಕ ಸಂಘಟನೆಗಳು ನೈತಿಕ ಬೆಂಬಲ ನೀಡಿದ್ದು, ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ನಗರದಲ್ಲಿ ಜನಜೀವನ ಸಹಜವಾಗಿತ್ತು. ಖಾಸಗಿ, ಸರ್ಕಾರಿ ಬಸ್ ಸಂಚಾರ ಎಂದಿನಂತೆ ಇದ್ದುದರಿಂದ ಪ್ರಯಾಣಿಕರಿಗೆ ತೊಂದರೆಯಾಗಲಿಲ್ಲ. ಬಸ್, ಆಟೋ, ರೈಲು, ವಾಹನ ಸಂಚಾರ ಎಂದಿನಂತೆ ಇತ್ತು. ಬಂದ್ ಬಿಸಿ ಸಾರ್ವಜನಿಕರಿಗೆ ತಟ್ಟಲಿಲ್ಲ.

ಶಾಲಾ, ಕಾಲೇಜುಗಳು,ಸರಕಾರಿ ಕಚೇರಿ, ನಗರಸಭೆ, ಪೆಟ್ರೋಲ್ ಬಂಕ್, ಬ್ಯಾಂಕ್ ಗಳು ಎಂದಿನಂತೆ ನಡೆದವು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ  ಮುಂಭಾಗ ಹಲವು  ಸಂಘಟನೆಗಳ ಪ್ರತಿಭಟನೆ ನಡೆಸಿದರು.

ಬೃಹತ್ ಪ್ರತಿಭಟನೆ:

ನಗರದ ವಿವಿಧೆಡೆಯಿಂದ ಆಗಮಿಸಿದ ಸಂಯುಕ್ತ ಕಿಸಾನ್ ಮೋರ್ಚಾ, ರೈತ, ದಲಿತ, ಕಾರ್ಮಿಕ, ಮಹಿಳಾ, ಕನ್ನಡಪರ ಹಾಗು ಪ್ರಗತಿಪರ ಸಂಘಟನೆಗಳ ಹಾಗೂ ಆಮ್ ಆದ್ಮಿ ಪಕ್ಷದ  ನೇತೃತ್ವದಲ್ಲಿ ಸಂಘಟನೆಗಳ ಪ್ರಮುಖರು ಮೆರವಣಿಗೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಸಾಗಿ ಡಾ.ರಾಜಕುಮಾರ್ ರಸ್ತೆ, ಹಾಲಪ್ಪವೃತ್ತ, ಮಾಧವಾಚಾರ್ ವೃತ್ತ,  ರಂಗಪ್ಪ ವೃತ್ತದಿಂದ ಮಿನಿವಿಧಾನ ಸೌಧದಲ್ಲಿ ಬಹಿರಂಗ ಸಭೆ ನಡೆಸಿದರು.

ಕಾರ್ಮಿಕ ಮುಖಂಡರು, ರೈತ ನಾಯಕರು ಮಾತನಾಡಿ, ರೈತರ ಭೂಮಿಯನ್ನು ಕಸಿದುಕೊಂಡು ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ತಿದ್ದುಪಡಿ ನೀತಿಯನ್ನು ರೈತರು ಸಂಪೂರ್ಣವಾಗಿ ವಿರೋಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರತಿಭಟನೆ ಇನ್ನೂ ದೊಡ್ಡ ಪ್ರಮಾಣದಲ್ಲಿ ಹೊರಹೊಮ್ಮಲಿದೆ ಎಂದರು.

ಜನಸಾಮಾನ್ಯರ ಊಟದ ತಟ್ಟೆಗೆ ಕೇಂದ್ರ ಸರ್ಕಾರ ಕೈಹಾಕಿದ್ದು, ರೈತರು ಮತ್ತು ದೇಶದ ಜನ ಸಾಮಾನ್ಯ ಮುಂದಿನ ದಿನಗಳಲ್ಲಿ ಕಾರ್ಪೋರೇಟ್ ಕಂಪನಿಗಳ ಗುಲಾಮರಾಗುತ್ತಾರೆ. ವಂಶ ಪಾರಂಪರ್ಯದಿಂದ ಉಳಿಸಿಕೊಂಡ ಭೂಮಿಯನ್ನು ಮುಂದಿನ ಪೀಳಿಗೆ ಕಳೆದುಕೊಳ್ಳಲಿದೆ. ಆಹಾರಕ್ಕಾಗಿ ಸಂಕಟಪಡುವ ದಿನ ದೂರವಿಲ್ಲ.
ಕೂಡಲೇ ಕೇಂದ್ರ ಮತ್ತು ರಾಜ್ಯ ರೈತರನ್ನು ಕರೆದು ಅವರ ವಿಶ್ವಾಸ ಪಡೆದು ಮಾತುಕತೆ ನಡೆಸಿ ಕೃಷಿ ಕಾಯ್ದೆ ತಿದ್ದುಪಡಿ ನೀತಿಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ  ಡಿ.ವಿ.ವಿರೇಶ್, ಹಿರಿಯಣ್ಣಯ್ಯ, ಮಂಜಪ್ಪಗೌಡ, ಯಶವಂತರಾವ್ ಘೋರ್ಪಡೆ, ಶರತ್ ಚಂದ್ರ, ಪ್ರಗತಿಪರ ಸಂಘಟನೆಗಳ ಮುಖಂಡರಾದ ಸಿ.ಮಾಯಣ್ಣ, ಸುರೇಶ್, ಎಎಪಿ ರವಿಕುಮಾರ್, ಪರಮೇಶ್ವರಚಾರ್, ಕುಬೇಂದ್ರ,  ಮೊದಲಾದವರಿದ್ದರು.

ನಂತರ ತಹಸೀಲ್ದಾರ್ ರವರ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ವಿಜಯ ಸಂಘರ್ಷಕ್ಕೆ ಸುದ್ದಿ & ಜಾಹೀರಾತು ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು