ವಿಜಯ ಸಂಘರ್ಷ
ಬೆಂಗಳೂರು: ಕರೋನಾ ಸಾಂಕ್ರಾಮಿಕ ಲಾಕ್ಡೌನ್ ನಿಂದ ಸ್ವಲ್ಪ ಬಿಡುಗಡೆ ಗೊಂಡವರಿಗೆ ಶಾಪಿಂಗ್ ನ ಅವಕಾಶ ದೊರಕಿಸಿಕೊಡುವ ನಿಟ್ಟಿನಲ್ಲಿ ಸೆ: 26 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಆರ್ಟ್ಸ್ ಅಂಡ್ ಕ್ರಾಫ್ಟ್ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ನಟಿ ಚಂದನಾ ರಾಘವೇಂದ್ರ ಚಾಲನೆ ನೀಡಿದರು.
ಸರ್ಕಾರಿ ಆದೇಶದಂತೆ ಕೋವಿಡ್ ಎಲ್ಲಾ ರೀತಿಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಬೆಳಿಗ್ಗೆ 11 ರಿಂದ ಸಂಜೆ 7 ರವರೆಗೆ ಪ್ರವೇಶ ಉಚಿತವಾಗಿದೆ.
ಜನರ ಶಾಪಿಂಗ್ ಥೆರಪಿಗೆ ಬೇಕಾಗಿರುವ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹು ದಾಗಿದೆ. 80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿ ರುವ ಕಲಾವಿದರುಗಳು ತಮ್ಮ ಕಲೆಯ ನ್ನು ಪ್ರದರ್ಶನಕ್ಕೆ ಇಡಲಿದ್ದಾರೆ.
ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ. ಇದರ ಜೊತೆಯಲ್ಲಿಯೇ, ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಕೈಮಗ್ಗದ ಸೀರೆ, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ ಎಂದು ನಟಿ ಚಂದನಾ ರಾಘವೇಂದ್ರ ತಿಳಿಸಿದರು.
ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿಯ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ. ಹೆಚ್ಚಿನ ಮಾಹಿತಿಗಾಗಿ,
96118 35597 ಸಂಪರ್ಕಿಸಿ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795