ಪಾಲಿಕೆ ವತಿಯಿಂದ ಪ್ರತಿಮನೆಗೂ ಕಸದ ಬಕೆಟ್ ವಿತರಣೆ

 

ವಿಜಯ ಸಂಘರ್ಷ



ಶಿವಮೊಗ್ಗ : ಸ್ವಚ್ಛ ಭಾರತ ಮಿಷನ್ ಯೋಜನೆಯ ಅಡಿಯಲ್ಲಿ ಮಹಾನಗರ ಪಾಲಿಕೆ ವತಿಯಿಂದ ಪ್ರತಿಮನೆಗಳಿಗೆ  ಉಚಿತವಾಗಿ ಕಸದ ಬಕೆಟ್ ಗಳನ್ನು ಹಂಚುವ ಕಾರ್ಯಕ್ರಮಕ್ಕೆ ಇಂದು  ಸಚಿವ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಿದರು.

ಮಹಾನಗರಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ ಮಾತನಾಡಿ, ಈ ಯೋಜನೆಯ ಅಡಿಯಲ್ಲಿ ಒಟ್ಟು 82 ಸಾವಿರ ಮನೆಗಳಿಗೆ ಪಾಲಿಕೆ ವತಿಯಿಂದ ಕಸದ ಬುಟ್ಟಿಗಳನ್ನು ನೀಡಲಾಗುತ್ತಿದ್ದು, ಒಣ ಕಸ ಹಾಗೂ ಹಸಿ ಕಸ  ವಿಂಗಡಿಸುವ ಸಲುವಾಗಿ ಪ್ರತಿ ಮನೆಗೆ ನೀಲಿ ಹಾಗೂ ಹಸಿರು ಬಣ್ಣದ ಒಂದೊಂದು ಕಸದ ಬುಟ್ಟಿಗಳನ್ನು ವಿತರಿಸಲಾಗುತ್ತಿದೆ. ಪ್ರತಿ ಮನೆಯ ಸ್ವಚ್ಛತೆಯನ್ನು ಕಾಪಾಡುವ ಸಲುವಾಗಿ ಸ್ವಚ್ಛ ಭಾರತ ಮಿಷನ್‍ನ ಅಡಿಯಲ್ಲಿ ಪಾಲಿಕೆ ಕಸದ ಬುಟ್ಟಿಗಳನ್ನು ನೀಡಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿ ಕೊಳ್ಳಬೇಕು ಎಂದರು.



ಖಾಯಂ ಹಾಗೂ ಹೊರಗುತ್ತಿಗೆ ಮೂಲಕ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಹಾಗೂ ಒಳಚರಂಡಿ ಕಾರ್ಮಿಕರ ನ್ನೊಳಗೊಂಡಂತೆ ಒಟ್ಟು 657 ಕಾರ್ಮಿಕರಿಗೆ ವರ್ಷಕ್ಕೆ ಒಂದು ಬಾರಿ ಆರೋಗ್ಯ ಪರೀಕ್ಷೆ ಹಾಗೂ ಹೆಪಟೈಟಿಸ್ -ಬಿ ಲಸಿಕೆಯನ್ನು ಸುಬ್ಬಯ್ಯ ಆಸ್ಪತ್ರೆಯಲ್ಲಿ ನೀಡುವ ಯೋಜನೆ ಇದಾಗಿದೆ ಎಂದರು.

ಪಾಲಿಕೆಯ ಆಯುಕ್ತ ಚಿದಾನಂದ ಎಸ್ ವಠಾರೆ, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರು, ಸದಸ್ಯರುಗಳು, ಫಲಾನುಭವಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ವಿಜಯ ಸಂಘರ್ಷಕ್ಕೆ ಸುದ್ದಿ & ಜಾಹೀರಾತು ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು