ವಿಜಯ ಸಂಘರ್ಷ
ಭದ್ರಾವತಿ: ಕೃಷಿ,ವಿದ್ಯುತ್, ಬೆಲೆ ಏರಿಕೆ ಮುಂತಾದ ರೈತವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ರೈತರು ನಡೆಸುತ್ತಿರುವ ಹೋರಾಟದ ಅಂಗವಾಗಿ ಸೋಮವಾರ ರೈತಪರ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದು ರೈತರ ಹಿತದೃಷ್ಟಿಯಿಂದ ನಗರ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ ನಡೆಸಿ ಬೆಂಬಲವ್ಯಕ್ತಪಡಿಸ ಲಾಯಿತು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆಯನ್ನುದ್ದೇಶಿಸಿ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ರೈತವಿರೋದಿ ಜನಸಾಮಾನ್ಯರ ಕಾರ್ಮಿಕ ವಿರೋಧಿ ಬಿಜೆಪಿಯ ಪ್ರಧಾನಿ ನರೇಂದ್ರ ಮೋದಿಯ ಸರ್ಕಾರದ ಬೆಲೆ ಏರಿಕೆ ಮಾಡಿ ಜನಸಾಮಾನ್ಯರನ್ನು ಬೀದಿಪಾಲು ಮಾಡಿದೆ.
ಕಳೆದ 10 ತಿಂಗಳಿನಿಂದ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ತಿರುಗಿಯೂ ನೋಡದ ಭ್ರಷ್ಟ ಬಿಜೆಪಿ ಸರಕಾರಕ್ಕೆ ರೈತರು ಹಿಡಿಶಾಪ ಹಾಕುತ್ತಿದ್ದಾರೆ. ಆದರೂ ಇಂತಹ ಸಂದರ್ಭದಲ್ಲಿ ಬೆಲೆ ಏರಿಕೆಯಾಗುತ್ತಿದ್ದು ಅತ್ಯಂತ ತೀವ್ರ ಖಂಡನೀಯ ರೈತರು ಜನಸಾಮಾನ್ಯರು ಬಿಜೆಪಿ ಸರ್ಕಾರವನ್ನು ಛೀಮಾರಿ ಹಾಕಿ ತೊಲಗಿಸುವ ದಿನ ಹತ್ತಿರವಿದೆ ಎಂದು ಕಿಡಿ ಕಾರಿದರು.
ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಜಿ ವಿನೋದ್ ಕುಮಾರ್, ಉಪಾಧ್ಯಕ್ಷ ತೇಜಸ್, ಪ್ರಧಾನ ಕಾರ್ಯದರ್ಶಿ ಮಧುಸೂದನ್,ಭರತ್, ಸುನಿಲ್, ನವೀನ್, ಗ್ರಾಮಾಂತರ ಅಧ್ಯಕ್ಷ ಅಫ್ತಾಬ್ ಅಹ್ಮದ್ ಸೇರಿದಂತೆ ಪಕ್ಷದ ಮುಖಂಡರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ವಿಜಯ ಸಂಘರ್ಷಕ್ಕೆ ಸುದ್ದಿ & ಜಾಹೀರಾತು ನೀಡಲು ಕರೆ ಮಾಡಿ +91 9743225795