ಗಣಕ ಯಂತ್ರಗಳನ್ನು ವಿದ್ಯಾರ್ಥಿಗಳ ಬಳಕೆಗೆ ಚಾಲನೆ

 

ವಿಜಯ ಸಂಘರ್ಷ



ಭದ್ರಾವತಿ:  ಕಾಗ್ನಿಜೆಂಟ್ ಕಂಪನಿ ಹಾಗು ರೋಟರಿ ಕ್ಲಬ್ ಸಹಯೋಗದೊಂದಿಗೆ ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿಗೆ  ಉಚಿತವಾಗಿ ಸುಮಾರು15 ಗಣಕ ಯಂತ್ರಗಳನ್ನು ವಿದ್ಯಾರ್ಥಿಗಳ  ಬಳಕೆಗೆ ಚಾಲನೆ ನೀಡಲಾಯಿತು.

ಕಾಲೇಜಿನ ಗಣಕಯಂತ್ರ ವಿಭಾಗದಲ್ಲಿ ಬಳಕೆಗೆ ಅವಕಾಶ ಕಲ್ಪಿಸಲಾಗಿದ್ದು, ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ ಉಮಾಶಂಕರ್ ಚಾಲನೆ ನೀಡಿ ಕಾಗ್ನಿಜೆಂಟ್ ಕಂಪನಿ ಹಾಗು ರೋಟರಿ ಕ್ಲಬ್‌ಗಳ ಸಮಾಜಮುಖಿ ಕಾರ್ಯ ಗಳಿಗೆ ಕೃತಜ್ಞತೆ ಸಲ್ಲಿಸಿದರು.

 ಕಾರ್ಯಕ್ರಮವನ್ನು ಮಾಹಿತಿ ತಂತ್ರಜ್ಞಾನ ಸಂಯೋಜಕ ಡಾ. ಎಂ.ಎಚ್ ಪ್ರಕಾಶ್ ಆಯೋಜಿಸಿದ್ದರು. ಕಾಲೇಜಿನ ಬೋಧಕ ಹಾಗು ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು