ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪ ನೆ : ಕರಪತ್ರದ ಮೂಲಕ ಜಾಗೃತಿ

 

ವಿಜಯ ಸಂಘರ್ಷ



ಶಿವಮೊಗ್ಗ: ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ವೇಳೆ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿ ಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ವಿನೋಬನಗರ ಠಾಣೆ ಪೊಲೀಸರು ಕರಪತ್ರ ಮುದ್ರಿಸಿ ಜನಜಾಗೃತಿ ಮೂಡಿಸುವ ಕಾರ್ಯ ಆರಂಭಿಸಿದ್ದಾರೆ.

ಮಂಗಳವಾರ ನಗರದ ಹೊರವಲಯ ಸೋಮಿನಕೊಪ್ಪ ಕೆ.ಹೆಚ್.ಬಿ. ಪ್ರೆಸ್ ಕಾಲೋನಿ ಸುತ್ತಮುತ್ತಲಿನ
ಬಡಾವಣೆಗಳಲ್ಲಿ ವಿನೋಬನಗರ ಠಾಣೆ ಪೊಲೀಸರು, ಸಾರ್ವಜನಿಕ ಸ್ಥಳದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡುವ ವೇಳೆ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ಒಳಗೊಂಡ ಕರಪತ್ರಗಳ ವಿತರಿಸಿದರು. ಈ ವೇಳೆ ಬೀಟ್ ಪೊಲೀಸರಾದ ಧನರಾಜ್, ಮೂರ್ತಿ ಉಪಸ್ಥಿತರಿದ್ದರು.

*ಪಾಲಿಸಿ:* ಕೊರೊನಾ ವೈರಸ್ ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿ ಗಳನ್ನು ಪ್ರತಿಯೋರ್ವರು ಪಾಲಿಸಬೇಕು. ಸಾರ್ವಜನಿಕ ಸ್ಥಳದಲ್ಲಿ ಗಣೇಶಮೂರ್ತಿ
ಪ್ರತಿಷ್ಠಾಪನೆಗೆ ಸ್ಥಳೀಯ ಆಡಳಿತಗಳಿಂದ ಪೂರ್ವಾನುಮತಿ ಪಡೆದುಕೊಳ್ಳಬೇಕು.
ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬಾರದು.

20 ಕ್ಕಿಂತ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು. ಸಮಿತಿಯವರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು. ಕಾನೂನು ಸುವ್ಯವಸ್ಥೆಗೆ ಭಂಗವಾಗದಂತೆ ನೋಡಿಕೊಳ್ಳಬೇಕು.
ಜಿಲ್ಲಾಡಳಿತ-ಪೊಲೀಸ್ ಇಲಾಖೆಯ ನಿರ್ದೇಶನಗಳ ಪಾಲಿಸಬೇಕು. ನಿಯಮ ಉಲ್ಲಂಘಿಸುವವರ
ವಿರುದ್ದ ಕಾನೂನು ಕ್ರಮದ ಎಚ್ಚರಿಕೆ ಸೇರಿದಂತೆ ಹಲವು ಸಲಹೆ-ಸೂಚನೆ ಗಳನ್ನು ಪೊಲೀಸ್ ಇಲಾಖೆಯು ಕರಪತ್ರದಲ್ಲಿ ಮಾಹಿತಿ ನೀಡಿದೆ.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು