ವಿವಿಧ ಬೇಡಿಕೆ ಈಡೇರಿಕೆಗೆ ನಾಳೆ ಪ್ರತಿಭಟನೆ

 

ವಿಜಯ ಸಂಘರ್ಷ



ಭದ್ರಾವತಿ: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್  ತಾಲೂಕು ಶಾಖೆ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆ.24 ರಂದು ಅಖಿಲ ಭಾರತ ಮುಷ್ಕರ ಹಮ್ಮಿಕೊಳ್ಳಲಾಗಿದೆ.

ಮಿನಿ ವಿಧಾನ ಸೌಧ ಮುಂಭಾಗ ಪ್ರತಿಭಟನೆ ನಡೆಸಿ ಬೇಡಿಕೆಗಳನ್ನು ಈಡೇರಿಸಿಕೊಡುವಂತೆ ಒತ್ತಾಯಿಸಿ ಪ್ರಧಾನ ಮಂತ್ರಿಗಳಿಗೆ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಹಾಗು  ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಫೆಡರೇಷನ್ ಅಧ್ಯಕ್ಷೆ ಸುಶೀಲಾಬಾಯಿ,  ಮುಖಂಡರಾದ ಆರ್. ವೇದಾವತಿ, ಕೆ.ಸಿ ವಿಶಾಲ ಕೋರಿದ್ದಾರೆ.

ವಿಜಯ ಸಂಘರ್ಷಕ್ಕೆ ಸುದ್ದಿ & ಜಾಹೀರಾತು ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು