ಕುವೆಂಪು ವಿವಿ ಘಟಿಕೋತ್ಸ ವಕ್ಕೆ ನಿರ್ಮಲ ಸೀತಾ ರಾಮನ್...?

 

ವಿಜಯ ಸಂಘರ್ಷ



ಭದ್ರಾವತಿ : ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿರುವ ಕುವೆಂಪು ವಿಶ್ವವಿದ್ಯಾ ಲಯದ 31ನೇ ವಾರ್ಷಿಕ ಘಟಿಕೋತ್ಸ ವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾಗವಹಿಸಲು ಸಮ್ಮತಿಸಿದ್ದಾರೆ.

ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ನೇತೃತ್ವದ ವಿಶ್ವವಿದ್ಯಾಲಯದ ನಿಯೋಗ ಗುರುವಾರ ಮಧ್ಯಾಹ್ನ ನವದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿ ಘಟಿಕೋತ್ಸವಕ್ಕೆ ಆಹ್ವಾನ ನೀಡಿತು. ಈ ಸಂದರ್ಭದಲ್ಲಿ ವಿವಿ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಚಿವರು ಸಮ್ಮತಿ ಸೂಚಿಸಿದ್ದು, ಅಕ್ಟೋಬರ್ ಕೊನೆಯ ವಾರದಲ್ಲಿ ದಿನಾಂಕ ನಿಗದಿಪಡಿಸಿ ತಿಳಿಸಲಾಗುವುದು ಎಂದಿದ್ದಾರೆ.

ಕೋವಿಡ್ ನಿಬಂಧನೆಗಳು ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಈ ಬಾರಿ ಘಟಿಕೋತ್ಸವ ಆಫ್‌ಲೈನ್ ಮಾದರಿಯಲ್ಲಿಯೇ ನಡೆಯಲಿದ್ದು, ಸಚಿವರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುತ್ತಿರುವುದು ಸಂತಸದ ವಿಷಯ ಎಂದು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.

ಪರೀಕ್ಷಾಂಗ ಕುಲಸಚಿವ ಪ್ರೊ. ಸಿ. ಎಂ. ತ್ಯಾಗರಾಜ, ದೂರಶಿಕ್ಷಣ ನಿರ್ದೇಶನಾಲಯ ನಿರ್ದೇಶಕ ಪ್ರೊ. ಎಸ್. ಎನ್.ಯೋಗೀಶ್, ಕುವೆಂಪು ವಿಶ್ವವಿದ್ಯಾಲಯದ ದೆಹಲಿ ಪ್ರತಿನಿಧಿ ಉಪಸ್ಥಿತರಿದ್ದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು