ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಪ್ರಕಟಿಸಿದ ಸರ್ಕಾರ

 

ವಿಜಯ ಸಂಘರ್ಷ



ಬೆಂಗಳೂರು: ಕರೊನಾ ಮೂರನೇ ಅಲೆ ಭೀತಿಯ ಮಧ್ಯೆ ಅ: 23 ರಂದು 9, 10 ನೇ ತರಗತಿ ಆರಂಭವಾಗಿದ್ದರೆ, ಇದೀಗ 6 ರಿಂದ 8ನೇ ತರಗತಿ ಆರಂಭವಾಗಿವೆ. ಇದರ ಬೆನ್ನಲ್ಲೇ ದಸರಾ ಹಬ್ಬ ಶುರುವಾಗಿದೆ. ಪ್ರತಿ ವರ್ಷದಂತೆ ಈ ವರ್ಷ ದಸರಾ ರಜೆ ಕೊಡುತ್ತಾರೋ ಇಲ್ಲವೋ ಎಂಬ ಗೊಂದಲಕ್ಕೆ ತೆರೆ ಬಿದ್ದಿದೆ.

ದಸರಾ ಮತ್ತು ಬೇಸಿಗೆ ರಜೆಗಳನ್ನು ಕೊಡುತ್ತಾರೋ ಇಲ್ಲವೋ ಎಂಬ ಗೊಂದಲದಲ್ಲಿ ವಿದ್ಯಾರ್ಥಿಗಳು ಇದ್ದರು. ಇದೀಗ ಅವರಿಗೆ ಖುಷಿ ನೀಡುವ ಸುದ್ದಿ  ಸರ್ಕಾರ ಘೋಷಿಸಿದ್ದು, ರಜೆಗಳ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ.

ಸರ್ಕಾರ ಹೊರಡಿಸಿರುವ ಸುತ್ತೋಲೆ ಪ್ರಕಾರ, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜು: 2021 ರಿಂದ ಏ: 2022 ರ ವರೆಗೆ 304 ದಿನಗಳು ಲಭ್ಯವಿದ್ದು, 66 ರಜೆ ದಿನಗಳಿವೆ. ಉಳಿದ 238 ದಿನಗಳಲ್ಲಿ 4 ಸ್ಥಳೀಯ ರಜೆ, ದಸರಾ ರಜೆ ಹೊರತಾಗಿ 223 ಶಾಲಾ ಕರ್ತವ್ಯದ ದಿನಗಳು ಕಲಿಕೆ, ಬೋಧನಾ ಪ್ರಕ್ರಿಯೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿವೆ.

ಇನ್ನು, ಅ: 10 ರಿಂದ ಅ.20ರವರೆಗೆ 1ರಿಂದ 10ನೇ ತರಗತಿಯ ಮಕ್ಕಳಿಗೆ ದಸರಾ ರಜೆ ನೀಡಲಾಗಿದೆ. ಇದು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ, ಅನುದಾನರಹಿತ ಶಾಲೆಗಳಿಗೆ ಅನ್ವಯ ಆಗಲಿದೆ. ಅದೇ ರೀತಿ, 2022ರ ಮೇ 1 ರಿಂದ 28 ರವರೆಗೆ ಬೇಸಿಗೆ ರಜೆ ಇರಲಿದೆ.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು