ವಿಜಯ ಸಂಘರ್ಷ
ಭದ್ರಾವತಿ : ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ನಗರದ ಅಂಬೇಡ್ಕರ್ ವೃತ್ತದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಶಾಸಕ ಬಿ.ಕೆ. ಸಂಗಮೇಶ್ವರ್ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್- ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರನ್ನು ಬೀದಿಗೆ ತಳ್ಳಿದೆ ಎಂದು ಆಕ್ರೋಶವ್ಯಕ್ತ ಪಡಿಸಿದರು.
ದೇಶಕ್ಕೆ ಅಚ್ಚೇ ದಿನ್ ತರುತ್ತೇನೆಂದು ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಅಡುಗೆ ಅನಿಲದ ದರವನ್ನು ದಿನನಿತ್ಯ ಏರಿಕೆ ಮಾಡುತ್ತಾ ಮತ್ತೆ ಒಂದೇ ತಿಂಗಳಲ್ಲೇ ಎರಡು ಬಾರಿ ಅಡುಗೆ ಅನಿಲದ ದರವನ್ನು ಏರಿಕೆ ಮಾದಿದೆ. ಕೋವಿಡ್ ಸಂಕಷ್ಟದಲ್ಲಿರುವ ದೇಶದ ಶ್ರೀಸಾಮಾನ್ಯನ ಮೇಲೆ ಬರೆ ಎಳೆದಿದೆ. ಇಂತಹ ನೀಚ ಸರ್ಕಾರವನ್ನು ಕಿತ್ತೊಗೆಯಬೇಕೆಂದರು.
ಹಲವಾರು ರೈತ-ಕಾರ್ಮಿಕ ಜನವಿರೋಧಿ ನೀತಿಗಳನ್ನು ಅನುಷ್ಠಾನಗೊಳಿಸಲು ಹಾಗೂ ದೇಶದ ಅದು ಮೂರು ವಲಯಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಹಾಗೂ ಕೋವಿಡ್ ನಿರ್ವಹಣೆಯಲ್ಲಿ ವಿಫಲವಾದ ಈ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹಲವು ಬಾರಿ ಎಚ್ಚರಿಕೆ ನೀಡಿದ್ದು ಕೂಡಲೇ ರಾಷ್ಟ್ರಪತಿಗಳು ಈ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರವನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದರು.
ನಗರಸಭಾ ಸದಸ್ಯರಾದ ಸಂದೀಪ್, ಶ್ರೇಯಸ್, ಜಾರ್ಜ್ , ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಜಿ ವಿನೋದ್ ಕುಮಾರ್, ಮುಖಂಡರಾದ ತೇಜಸ್ ಗೌಡ, ಭರತ್, ಮಧುಸೂದನ್, ಶಂಕರ್, ನವೀನ್, ಚೇತನ್,ನಂದನ್, ಸುನಿಲ್, ಸಚಿನ್, ಮನು, ಸಂಜಯ್, ಸ್ಟೀಫನ್, ರಾಜ್ ಕ್ರಿಸ್ಟಿ, ಸುನಿಲ್ ,ಯೋಗೀಶ್, ಸೋಮಣ್ಣ ,ರಂಜಿತ್ ,ಧರ್ಮೇಂದ್ರ ,ರಾಜ್ ವೀರ್, ಗಗನ್, ಶ್ರೀನಿವಾಸ್, ಮುರುಳಿ, ಶ್ರೀನಿವಾಸ್, ಮಂಜು, ಹರೀಶ್, ಐಸಾಕ್ ಇತರರಿದ್ದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795