ಮಾಜಿ ಸಿಎಂ ಕುಮಾರ ಸ್ವಾಮಿ ರವರಿಂದ ದಿ.ಅಪ್ಪಾಜಿ ರವರ ಪುತ್ಥಳಿ ಅನಾವರಣ


 

ವಿಜಯ ಸಂಘರ್ಷ



ಭದ್ರಾವತಿ : ದೇವಾಲಯ ದ್ವಂಸ ಪ್ರಕರಣದ ತಪ್ಪನ್ನು ಮುಚ್ಚಿಕೊಳ್ಳಲು ಬಿಜೆಪಿ ದೇವಾಲಯದ ರಕ್ಷಣಾ ವಿಧೇಯಕ ತರಲು ಹೊರಟಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರ ಸ್ವಾಮಿ ಹೇಳಿದ್ದಾರೆ.



ತಾಲ್ಲೂಕಿನ ಗೋಣಿಬೀಡು ಗ್ರಾಮದಲ್ಲಿ  ಮಾಜಿ ಶಾಸಕ ದಿ.ಅಪ್ಪಾಜಿ ರವರ ಪುತ್ಥಳಿ ಅನಾವರಣಗೊಳಿಸಿ ಅವರು ಮಾತನಾಡಿದರು.

ಬಿಜೆಪಿಯವರು ಒಂದೆಡೆ ಹಿಂದುತ್ವದ ಹೆಸರು ಹೇಳುತ್ತಾರೆ. ಮತ್ತೊಂದೆಡೆ ಅವರದ್ದೇ ಸರ್ಕಾರ ದೇವಸ್ಥಾನ ಒಡೆಯುತ್ತದೆ. ವಿಧೇಯಕ ತರಲು ಹೊರಟಿರುವ ಮೊದಲೇ ಅವರು ಎಚ್ಚೆತ್ತುಕೊಳ್ಳಬೇಕಿತ್ತು ಎಂದರು.

ಇದೇ ತಿಂಗಳ 27ರಂದು ಬೆಂಗಳೂರಿ ನಲ್ಲಿ ಜೆಡಿಎಸ್  ಕಾರ್ಯಾಗಾರ ಮಾಡಲು ನಿರ್ಧರಿಸಿದೆ. ಅಂದೇ ಮೊದಲ ಹಂತವಾಗಿ ಮುಂಬರುವ ವಿಧಾನಸಭಾ ಕ್ಷೇತ್ರದ 140 ಜನರ ಹೆಸರು ಬಿಡುಗಡೆ ಮಾಡಲಾಗುವುದು. ಅಲ್ಲಿ ಎಲ್ಲಾ ವಿಚಾರವನ್ನು ಚರ್ಚೆ ಮಾಡುತ್ತೇವೆ ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ದಿ.ಅಪ್ಪಾಜಿ ಅವರ ಪತ್ನಿ ಶಾರದಾ ಅಪ್ಪಾಜಿ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸ ಲಾಗುವುದು. ಇದನ್ನು‌ ಈಗಾಗಲೇ ಕ್ಷೇತ್ರದ ಜನ ನಿರ್ಧಾರಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಶಾರದಾ ಅಪ್ಪಾಜಿ, ಕಡೂರು ಕ್ಷೇತ್ರದ ಮಾಜಿ ಶಾಸಕ ವೈ.ಎಸ್.ವಿ ದತ್ತಾ, ಜೆಡಿಎಸ್ ತಾಲೂಕು ಅಧ್ಯಕ್ಷ ಆರ್.ಕರುಣಾಮೂರ್ತಿ, ಪಕ್ಷದ ಮುಖಂಡರಾದ ಎಂ.ಶ್ರೀಕಾಂತ್, ಬಳಿಗಾರ್,  ಜಿಪಂ ಮಾಜಿ ಸದಸ್ಯ ಎಸ್.ಕುಮಾರ್, ಜೆ.ಪಿ.ಯೋಗೇಶ್, ಎಸ್. ಮಣಿಶೇಖರ್, ನಗರಸಭಾ ಸದಸ್ಯರು ಹಾಗೂ ಚುನಾಯಿತ ಪ್ರತಿನಿಧಿಗಳು ಸೇರಿದಂತೆ  ಮತ್ತಿತರರಿದ್ದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು