ಪಂಚಮಸಾಲಿ ಸಮಾಜದ ಪರ ಹೋರಾಟಕ್ಕೆ ಶಾಸಕ ಸಂಗಮೇಶ್ವರ್ ಬೆಂಬಲ

 

ವಿಜಯ ಸಂಘರ್ಷ



ಭದ್ರಾವತಿ: ವೀರಶೈವ ಲಿಂಗಾಯಿತ ಪಂಚಮಸಾಲಿ ಸಮಾಜದ ಪರ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಕೂಡಲ ಸಂಗಮದ ಶ್ರೀ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರಿಗೆ ಬೆಂಬಲ ನೀಡುವುದಾಗಿ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.

ನಗರಕ್ಕೆ ಆಗಮಿಸಿದ ಶ್ರೀ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಯವರಿಗೆ ಗೌರವ ಸಮರ್ಪಣೆ ಸಲ್ಲಿಸಿ ಮಾತನಾಡಿದರು.

 ಸ್ವಾಮೀಜಿಯವರು ಯಾವುದೇ ಸ್ವಾರ್ಥಕ್ಕಾಗಿ ಹೋರಾಟ ನಡೆಸುತ್ತಿಲ್ಲ. ಪಂಚಮಸಾಲಿ ಸಮಾಜದ ಏಳಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಸಮಾಜದ ಮುಖ್ಯ ವಾಹಿನಿಯಲ್ಲಿ ಎಲ್ಲರೂ ಸಮಾನವಾಗಿ ಗುರುತಿಸಿ ಕೊಳ್ಳ ಬೇಕೆಂಬುದು ಹೋರಾಟದ ಉದ್ದೇಶ ವಾಗಿದೆ. ಇದನ್ನು ಎಲ್ಲರೂ ಅರ್ಥಮಾಡಿ ಕೊಳ್ಳಬೇಕು. ನ್ಯಾಯಬದ್ಧವಾದ ಹೋರಾಟಕ್ಕೆ ಸದಾ ಕಾಲ ಬೆಂಬಲ ನೀಡುತ್ತೇನೆ. ಸ್ವಾಮೀಜಿಯವರ ಹೋರಾಟಕ್ಕೆ ಕೈ ಜೋಡಿಸುತ್ತೇನೆ ಎಂದರು.

ಶ್ರೀ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ನಮ್ಮ ಹೋರಾಟಕ್ಕೆ ಎಲ್ಲೆಡೆ ವ್ಯಾಪಕವಾಗಿ ಬೆಂಬಲ ಲಭಿಸುತ್ತಿರುವುದು ಸಂತೋಷದ ವಿಚಾರವಾಗಿದೆ. ಶಾಸಕ ಸಂಗಮೇಶ್ವರ್ ಸಹ ಬೆಂಬಲ ಸೂಚಿಸಿರುವುದು ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬಿದಂತಾಗಿದೆ. ಎಲ್ಲರೂ ನಮ್ಮ ಹೋರಾಟಕ್ಕೆ ಕೈಜೋಡಿಸಬೇಕೆಂದರು.

ಚಾಮರಾಜ ನಗರ ಜಿಲ್ಲಾಧ್ಯಕ್ಷ ಮಲ್ಲೇಶ್, ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್.ಮಹೇಶ್‌ ಕುಮಾರ್, ಎಸ್. ಸತೀಶ್ ಮತ್ತಿತರಿದ್ದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು