ಭಾರತ್ ಬಂದ್ ಗೆ ಬೆಂಬಲಿಸಿ : ಕಿಸಾನ್ ಮೋರ್ಚಾ-ಎಎಪಿ ಕರೆ

 

ವಿಜಯ ಸಂಘರ್ಷ



ಭದ್ರಾವತಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ, ದಲಿತ, ಕಾರ್ಮಿಕ ಹಾಗು ಜನ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಸೆ.27 ರಂದು ಕರೆ ನೀಡಲಾಗಿರುವ ಭರತ್ ಬಂದ್‌ಗೆ ಸಂಯುಕ್ತ ಕಿಸಾನ್ ಮೋರ್ಚಾ ತಾಲೂಕು ಬೆಂಬಲ ವ್ಯಕ್ತಪಡಿಸಿದೆ.

 ರೈತ, ದಲಿತ, ಕಾರ್ಮಿಕ, ಮಹಿಳಾ, ಕನ್ನಡಪರ ಹಾಗು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಅಂದು ಬೆಳಿಗೆ 10.30 ಕ್ಕೆ ನಗರದ ಬಿ.ಎಚ್ ರಸ್ತೆ ಅಂಡ್‌ಬ್ರಿಡ್ಜ್ ಬಳಿ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ತಾಲೂಕು ಕಛೇರಿ ವರೆಗೂ ಹಮ್ಮಿಕೊಳ್ಳಲಾಗಿದೆ.

ಸಮಸ್ತ ನಾಗರೀಕರು ಪ್ರತಿಭಟನಾ ಮೆರವಣಿಗೆ ಬೆಂಬಲಿಸುವ ಮೂಲಕ ಯಶಸ್ವಿಗೊಳಿಸುವಂತೆ ರೈತ  ಮುಖಂಡರಾದ ಯಶವಂತರಾವ್ ಘೋರ್ಪಡೆ, ಎಚ್.ಪಿ ಹಿರಿಯಣ್ಣಯ್ಯ ಮತ್ತು ಡಿ.ವಿ ವೀರೇಶ್ ಕೋರಿದ್ದಾರೆ.

  ರೈತ ಹೋರಾಟಕ್ಕೆ ಎಎಪಿ ಬೆಂಬಲ:

ಕೇಂದ್ರ ಸರ್ಕಾರದ ರೈತವಿರೋಧಿ ಮಸೂದೆಗಳನ್ನು ಖಂಡಿಸಿ ವಿವಿಧ ರೈತ ಸಂಘಟನೆಗಳು ಕರೆ ನೀಡಿರುವ ಸೆ. 27 ರ ಹೋರಾಟಕ್ಕೆ  ಆಮ್ ಆದ್ಮಿ ಪಾರ್ಟಿ ಬೆಂಬಲ ನೀಡಲಿದೆ ಎಂದು ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಕೃಷಿಗೆ ಸಂಬಂಧಿಸಿದ ಮಸೂದೆಗಳಿಗೆ ತಿದ್ದುಪಡಿ ತಂದು ರೈತರ ಬದುಕಿನೊಂದಿಗೆ ಚೆಲ್ಲಾಟವಾಡು ತ್ತಿರುವುದನ್ನು ಖಂಡಿಸಿ ನಡೆಯುತ್ತಿರುವ ಹೋರಾಟಕ್ಕೆ ಎಎಪಿ ಸಂಪೂರ್ಣ ಬೆಂಬಲ ನೀಡಲಿದ್ದು, ಜಿಲ್ಲಾ ಹಾಗು ತಾಲೂಕು ಮಟ್ಟದಲ್ಲಿ ನಡೆಯುವ ಹೋರಾಟಕ್ಕೆ ಎಎಪಿ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟ ಯಶಸ್ವಿ ಗೊಳಿಸುವಂತೆ ಮನವಿ ಮಾಡಿದ್ದಾರೆ.

ವಿಜಯ ಸಂಘರ್ಷಕ್ಕೆ ಸುದ್ದಿ & ಜಾಹೀರಾತು ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು