ವಿಜಯ ಸಂಘರ್ಷ
ಭದ್ರಾವತಿ : ಜ್ಞಾನದ ಭಂಡಾರ ಹಿಂದೂಗಳ ಪವಿತ್ರ ಗ್ರಂಥವಾದ ಶ್ರೀ ರಾಮಾಯಣವನ್ನು ಬರೆದ ಮಹರ್ಷಿ ವಾಲ್ಮೀಕಿಯವರ ಅಮರ ಕಾವ್ಯ ರಾಮಾಯಣ ಇಂದಿಗೂ ಅಜರಾಮರ ಎಂದು ಸಹ್ಯಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಮೋಹನ್ ಚಂದ್ರಗುತ್ತಿ ಅಭಿಪ್ರಾಯ ವ್ಯಕ್ತಪಡಿಸಿದರು.
ಬುಧವಾರ ಹಳೇನಗರ ವೀರಶೈವ ಸಭಾಭವನದಲ್ಲಿ ತಾಲೂಕು ಆಡಳಿತ, ತಾಪಂ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಮಹರ್ಷಿ ವಾಲ್ಮೀಕಿ ನಾಯಕ ಸಮಾಜ ಮತ್ತು ವಿವಿಧ ಸಂಘಟಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡಿದರು.
ನ್ಯಾಯ, ಸಂಸ್ಕೃತಿ, ನೀತಿಗಳನ್ನು ತುಂಬಿ ಶ್ರೀರಾಮನನ್ನು ಸೃಷ್ಟಿಸಿ ಮಹಾನ್ ಗ್ರಂಥ ರಾಮಾಯಣವನ್ನು ಭಾರತೀಯರ ಜೀವನ ಚರಿತ್ರೆ ಮತ್ತು ಸಂಸ್ಕೃತಿ ಸಂಸ್ಕಾರ ತುಂಬಿದ ಮಹಾಕಾವ್ಯವಾಗಿದೆ. ಮಹರ್ಷಿ ವಾಲ್ಮೀಕಿಯವರ ಅಮರ ಕಾವ್ಯ ಎಂದೆಂದಿಗೂ ಅಜರಾಮರ ಎಂದರು.
ರಾಜ್ಯ ಸರ್ಕಾರಿ ನೌಕರರ ತಾಲೂಕು ಸಂಘದ ಅಧ್ಯಕ್ಷ ಸಿದ್ದಬಸಪ್ಪ ಮಾತನಾಡಿ, ತತ್ವಜ್ಞಾನಿ ಮಹರ್ಷಿ ವಾಲ್ಮೀಕಿಯವರ ಆದರ್ಶ ಗುಣಗಳು ಇಂದಿನ ಮಕ್ಕಳು ತಿಳಿದುಕೊಳ್ಳುವ ಅಗತ್ಯತೆ ಇದೆ. ಇಂದು ಅವಿಭಕ್ತ ಕುಟುಂಬಗಳು ವಿಭಕ್ತವಾಗಿ ವಿಂಗಡಣೆಗೊಂಡಿವೆ.
ಈ ಭೂಮಂಡಲದಲ್ಲಿ ಬೆಟ್ಟಗಳು ಪರ್ವತಗಳು ನದಿಗಳು ಇರುವವರೆಗೂ ರಾಮಾಯಣ ಪ್ರಸಾರಗೊಳ್ಳುತ್ತಲೆ ಇರುತ್ತದೆ ಹಾಗಾಗಿ ರಾಮಾಯಣ ಇರುವವರೆಗೂ ವಾಲ್ಮೀಕಿಯ ಹೆಸರು ಪ್ರಜ್ವಲಿಸುತ್ತದೆ ಎಂದರು.
ತಹಸೀಲ್ದಾರ್ ಆರ್. ಪ್ರದೀಪ್ ಸಮಾರಂಭ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರಸಭಾಧ್ಯಕ್ಷೆ ಗೀತಾ ರಾಜಕುಮಾರ್ ಮಹರ್ಷಿ ವಾಲ್ಮೀಕಿರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಉಪಾಧ್ಯಕ್ಷ ಚನ್ನಪ್ಪ, ಸದಸ್ಯರಾದ ಬಿ.ಕೆ. ಮೋಹನ್, ಟಿಪ್ಪುಸುಲ್ತಾನ್, ನಗರಸಭೆ ಆಯುಕ್ತ ಕೆ. ಪರಮೇಶ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಗೋಪಿನಾಥ್, ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್, ಸಮಾಜದ ಮುಖಂಡರಾದ ಎಲ್.ರಂಗಪ್ಪ, ಬಸವರಾಜಪ್ಪ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ 2020-21 ರ ಸಾಲಿನಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಲವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ +91 9743225795