ವಿಜಯ ಸಂಘರ್ಷ
ಭದ್ರಾವತಿ: ದುಶ್ಚಟಗಳಿಗೆ ಬಲಿಯಾದವರಿಗೆ ಹೊಸ ಜೀವನ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರೂಪಿಸಿ ಕೊಂಡಿರುವ ಕಾರ್ಯಕ್ಕೆ ಯಾರಿಂದಲೂ ಬೆಲೆಕಟ್ಟಲು ಸಾಧ್ಯವಿಲ್ಲ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಪ್ರಶಂಸೆ ವ್ಯಕ್ತಪಡಿಸಿದರು.
ಹಳೇನಗರದ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನವಜೀವ ನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಲವಾರು ಸಮಾಜಮುಖಿ ಕಾರ್ಯ ಗಳನ್ನು ಕೈಗೊಳ್ಳುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಈ ನಡುವೆ ದುಶ್ಚಟ ಗಳಿಗೆ ಬಲಿಯಾದವರನ್ನು ಸಹ ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿನಲ್ಲಿ ಬೆರೆಯುವಂತೆ ಮಾಡುತ್ತಿರುವುದು ಉತ್ತಮ ಕಾರ್ಯವಾಗಿದೆ. ಸಮಾಜದಲ್ಲಿ ಯಾರು ಸಹ ದುಶ್ಚಟಗಳಿಗೆ ಬಲಿಯಾಗಬಾರದು. ಪ್ರತಿಯೊಬ್ಬರು ಈ ನಿಟ್ಟಿನಲ್ಲಿ ಜಾಗೃತಿ ಹೊಂದಬೇಕೆಂದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಗಳಾದ ಪರಮ ಪೂಜ್ಯ ಡಾ|| ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆಯನ್ನು ಹುಟ್ಟು ಹಾಕಿದ್ದರ ಫಲವಾಗಿ ರಾಜ್ಯದಾದ್ಯಂತ ಈ ಯೋಜನೆಯಿಂದ ಬಡವರು ಆರ್ಥಿಕವಾಗಿ ಪ್ರಗತಿ ಸಾಧಿಸಿದ್ದಾರೆನಂದರು
ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಜಿ. ಆನಂದಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರಸಭಾ ಸದಸ್ಯರಾದ ಮಣಿ ಎಎನ್ಎಸ್, ಸುದೀಪ್ ಕುಮಾರ್, ಮಾಜಿ ಸದಸ್ಯ ಕೆ.ಎನ್ ಭೈರಪ್ಪ ಗೌಡ, ವೇದಿಕೆ ಸದಸ್ಯರಾದ ಆರ್. ಕರುಣಾಮೂರ್ತಿ, ಪಾಲಾಕ್ಷಪ್ಪ, ಯೋಜನೆಯ ಜಿಲ್ಲಾ ನಿರ್ದೇಶಕಿ ಬಿ. ಗೀತಾ, ತಾಲೂಕು ಯೋಜನಾಧಿಕಾರಿ ವೈ. ಪ್ರಕಾಶ್, ಅಕ್ಕಮಹಾದೇವಿ ಬಳಗದ ಸವರ್ಣಮ್ಮ ಸೇರಿದಂತೆ ಇನ್ನಿತರರಿದ್ದರು.
ಸುದ್ದಿ & ಜಾಹೀರಾತು ನೀಡಲು ಕರೆ ಮಾಡಿ +91 9743225795