ವಿಜಯ ಸಂಘರ್ಷ
ಶಿವಮೊಗ್ಗ: ಜಾತಿ ಪ್ರಮಾಣ ಪತ್ರ ಕೋರಿ ಬರುವ ಅರ್ಜಿಗಳನ್ನು ತಹಶೀಲ್ದಾರ್ ಗಳು ಕೂಲಂಕಷವಾಗಿ ಪರಿಶೀಲಿಸಿ ಪ್ರಮಾಣಪತ್ರ ನೀಡಬೇಕು ಎಂದು ಡಿಸಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲೆಯ ಎಲ್ಲ ತಾಲೂಕು ಆಡಳಿತಗಳಿಗೆ ಈ ಕುರಿತು ಸೂಚನೆ ನೀಡಿದ್ದಾರೆ.
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಅಧಿಕಾರಿ-ಸಿಬ್ಬಂದಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಾಗಲಿದೆ. ಈಗಾಗಲೇ ಇತರೆ ತಾಲೂಕುಗಳಲ್ಲಿ ನೀಡಲಾಗಿರುವ ಸುಳ್ಳು ಜಾತಿ ಪ್ರಮಾಣಪತ್ರಗಳ ಕುರಿತು ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ, 7 ಅರ್ಜಿಗಳನ್ನು
ವಜಾಗೊಳಿಸಲಾಗಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್. ಹೊನ್ನಳ್ಳಿ, ಡಿ.ಹೆಚ್.ಓ. ಡಾ.ರಾಜೇಶ್ ಸುರಗೀಹಳ್ಳಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕೆ.ನಾಗರಾಜ್
ಮೊದಲಾದವರಿದ್ದರು.
ಸುದ್ದಿ & ಜಾಹೀರಾತು ನೀಡಲು ಕರೆ ಮಾಡಿ +91 9743225795