ವಿಜಯ ಸಂಘರ್ಷ
ಭದ್ರಾವತಿ : ತಾಲೂಕಿನ ಬಿ.ಅರ್. ಪ್ರಾಜೆಕ್ಟ್ ನಲ್ಲಿನ ನೀರಾವರಿ ಇಲಾಖೆಯಲ್ಲಿ ನಡೆಯುತ್ತಿರುವ
ಕಾಮಗಾರಿಗಳ ನಿರ್ವಹಣೆಯಲ್ಲಿ ಎಂಜಿನಿಯರಗಳ ನಿರ್ಲಕ್ಷ್ಯ ಖಂಡಿಸಿ
ಶಾಸಕ ಬಿ.ಕೆ.ಸಂಗಮೇಶ್ವರ್ ನೇತೃತ್ವದಲ್ಲಿ ಕಚೇರಿ ಮುಂಭಾಗ ಪ್ರತಿಭಟಿಸಿ ಇಂದು ಮುತ್ತಿಗೆ ಹಾಕಲಾಯಿತು.
ಇಲಾಖೆ 3 ಕೋಟಿ ವೆಚ್ಚದಲ್ಲಿ ಸಿಸಿಟಿವಿ ಅಳವಡಿಕೆ ಮಾಡಿರುವುದು ನಿಯಮ ಬಾಹಿರವಾಗಿದ್ದು, ಕೆಲಸ ನಿರ್ವಹಿಸದೆ ದುರಸ್ತಿಯಲ್ಲಿದೆ, ವಸತಿ ಗೃಹದಲ್ಲಿನ ನಿವಾಸಿಗಳಿಗೆ ಕಳೆದ ಒಂದು ವಾರದಿಂದ ಕುಡಿಯುವ ನೀರು ಸರಬರಾಜು ಮಾಡದೆ ಇಲಾಖಾ ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆಂದು ಕಿಡಿಕಾರಿದರು.
ನಿಯಮಗಳನ್ನು ಗಾಳಿಗೆ ತೂರಿ ಹಲವಾರು ಕಾಮಗಾರಿಗಳನ್ನು ಟೆಂಡರ್ ಕರೆಯದೆ ಕೆಲಸ ನಡೆಸಲಾಗುತ್ತಿದೆ. ಇದಕ್ಕೆ ಕಾರಣರಾದ ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು ಹಾಗೂ ಸಂಬಂಧಪಟ್ಟ ಇಂಜಿನಿಯರುಗಳನ್ನು ಕೂಡಲೇ ಅಮಾನತುಗೊಳಿಸಬೇಕೆಂದು ಶಾಸಕರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕಂಬದಾಳು ಹೊಸೂರು ಗ್ರಾಮ ಪಂಚಾಯತ್ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಚಂದ್ರೇಗೌಡ ಗ್ರಾಮಾಂತರ ಅಧ್ಯಕ್ಷ ಎಚ್. ಎಲ್.ಷಡಾಕ್ಷರಿ, ಕಾಂಗ್ರೆಸ್ ಮುಖಂಡರಾದ ಬಿ.ಕೆ.ಮೋಹನ್. ಮಹೇಶ್ವರಪ್ಪ,ಈಶ್ವರ್, ಸಿಂಗನಮನೆ, ತಾವರಘಟ್ಟ ಪಕ್ಷದ ನೂರಾರು
ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ +91 9743225795