ಎಲ್ಪಿಜಿ ಅಡುಗೆ ಸಿಲಿಂಡರ್ ಬೆಲೆ ಏರಿಕೆ ಗ್ರಾಹಕರಿಗೆ ಬಿಗ್ ಶಾಕ್..!

 

ವಿಜಯ ಸಂಘರ್ಷ



ನವದೆಹಲಿ: ದೇಶದಲ್ಲಿ ಮತ್ತೆ ಎಲ್ಪಿಜಿ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. ಎಲ್ಪಿಜಿ ಅಡುಗೆ ಸಿಲಿಂಡರ್ ಬೆಲೆಯನ್ನು ಮತ್ತೆ 15 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ.

ದೇಶಾದ್ಯಂತ ಇಂದಿನಿಂದಲೇ ಹೊಸ ದರಗಳು ಜಾರಿಯಾಗಲಿವೆ ಎಂದು ಹೇಳಲಾಗಿದೆ.

ಪೆಟ್ರೋಲಿಯಂ ಕಂಪನಿಗಳು ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 15 ರೂ. ಹೆಚ್ಚಳ ಮಾಡಿದ್ದು, ದೆಹಲಿಯಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಸಿಲಿಂಡರ್ ಬೆಲೆ ಈಗ 899.50 ರೂ. ಆಗಿದೆ. 5 ಕೆಜಿ ಸಿಲಿಂಡರ್‌ನ ಹೊಸ ದರ ಈಗ 502 ರೂ. ಆಗಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.

ಸುದ್ದಿ & ಜಾಹೀರಾತು ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು