ವಿಜಯ ಸಂಘರ್ಷ
ಶಿವಮೊಗ್ಗ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2021-22 ನೇ ಸಾಲಿನ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಯು ಪತ್ರಿಕೋದ್ಯಮ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪಡೆದವರಾಗಿರಬೇಕು. ಕನ್ನಡ, ಇಂಗ್ಲೀಷ್ ಭಾಷೆಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು. 10 ತಿಂಗಳ ತರಬೇತಿ ಇದಾಗಿದ್ದು, ಪ.ಜಾ.ಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 15,000/-ರೂ.ಗಳ ಶಿಷ್ಯವೇತನ ನೀಡಲಾಗುವುದು.
ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿರಬೇಕು. ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಈ ಹಿಂದೆ ಅರ್ಜಿ ಸಲ್ಲಿಸಿ, ಆಯ್ಕೆಯಾಗಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಅವಕಾಶ ವಿರುವುದಿಲ್ಲ.
ಅರ್ಹರು ತಮ್ಮ ಸ್ವವಿವರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ದಿ:02/11/2021 ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್.ಎಂ.ವಿ.ರಸ್ತೆ, ಶಿವಮೊಗ್ಗ- 577201 ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-278638ನ್ನು ಸಂಪರ್ಕಿಸಿ.
ಸುದ್ದಿ & ಜಾಹೀರಾತು ನೀಡಲು ಕರೆ ಮಾಡಿ +91 9743225795