ವಿಜಯ ಸಂಘರ್ಷ
ಭದ್ರಾವತಿ : ತಾಲೂಕಿನ ಸಮೀಪದ ಲಕ್ಕವಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಕುವೆಂಪು ವಿವಿ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ (ಎಂಎಸ್ ಡಬ್ಲ್ಯೂ) ಆರೋಗ್ಯವೇ ಭಾಗ್ಯ ಕಾರ್ಯಕ್ರಮದಡಿಯಲ್ಲಿ ಆರೋಗ್ಯ ಶಿಬಿರ ಹಮ್ಮಿಕೊಳ್ಳ ಲಾಗಿತ್ತು.
ಕೆಸರಕೊಪ್ಪ, ಗುಂಡೇನಹಳ್ಳಿ ಹಾಗೂ ಸೋಮಪುರ ಗ್ರಾಮದಲ್ಲಿ ಗ್ರಾಮಸ್ಥರಿಗೆ ಯುನೈಟೆಡ್ ಹೆಲ್ತ್ ಕೇರ್ ಕೇಂದ್ರದ ಸಹಯೋಗದಲ್ಲಿ ಅರೋಗ್ಯ ಸುಧಾರಣೆ ಹಾಗೂ ಸ್ವಚ್ಛತೆ ಅರಿವು ಮೂಡಿಸಲಾಯಿತು.
ಹೆಲ್ತ್ ಕೇರ್ ಆಸ್ಪತ್ರೆಯ ಡಾ: ದಿಲೀಪ್, ಡಾ: ಟಿ.ಡಿ. ಸುನಿತಾ ಮತ್ತು ಸಿಬ್ಬಂದಿ ಗಳು ಭಾಗವಹಿಸಿದ್ದರು. ಈ ಸಂದರ್ಭ ದಲ್ಲಿ ಹಲಸೂರು ಗ್ರಾಮ ಪಂಚಾಯ ತ್ ಅಧ್ಯಕ್ಷ ಎಚ್.ಎಸ್.ಗಂಗಾಧರ್, ಸದಸ್ಯರಾದ ಮಹಮ್ಮದ್, ಇಬ್ರಾಹಿಂ, ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿಗಳು ಪಾಲ್ಗೊಂಡು ಗ್ರಾಮಸ್ಥರಿಗೆ ಆರೋಗ್ಯ ತಪಾಸಣೆ ಹಾಗೂ ಸ್ವಚ್ಛತೆ ಕುರಿತು ಅರಿವು ಮೂಡಿಸಿದರು. ಕುವೆಂಪು ವಿವಿ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವಿದ್ಯಾರ್ಥಿಗಳು, ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸುದ್ದಿ & ಜಾಹೀರಾತು ನೀಡಲು ಕರೆ ಮಾಡಿ +91 9743225795