ಗೃಹಮಂತ್ರಿ ಊರಲ್ಲಿ ಪಟ್ಟಣ ಪಂಚಾಯತ್ ಬಿಜೆಪಿ ಗೆ ಮುಖಭಂಗ "ಕೈ"ಗೆ ಜೈ

 

ವಿಜಯ ಸಂಘರ್ಷ



ತೀರ್ಥಹಳ್ಳಿ:ನಿರೀಕ್ಷೆಯಂತೆ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ ಹೋಗಿದೆ. ಅಧ್ಯಕ್ಷರಾಗಿ ಕಾಂಗ್ರೆಸ್​​ನ ಶಬನಂ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಜಯಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಕಳೆದ ಆರು ತಿಂಗಳ ಹಿಂದೆಯೇ ಪಟ್ಟಣ ಪಂಚಾಯತ್​​ಗೆ ಚುನಾವಣೆ ನಡೆದಿತ್ತು. ಇಲ್ಲಿನ 15 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 9 ಸ್ಥಾನ ಕಾಂಗ್ರೆಸ್ ಹಾಗೂ 6 ಸ್ಥಾನವನ್ನು ಬಿಜೆಪಿ ಪಡೆದಿತ್ತು.

ಅಧ್ಯಕ್ಷ -ಉಪಾಧ್ಯಕ್ಷರ ಮೀಸಲು ಪ್ರಕಟ ಮಾಡಿದ್ದರು ಸಹ ಚುನಾವಣೆಗೆ ಕಾಲ ನಿಗದಿ ಮಾಡಿರಲಿಲ್ಲ. ಸಾಕಷ್ಟು ಒತ್ತಡಗಳ ನಂತರ ಚುನಾವಣೆ ನಡೆಸಲಾಗಿದೆ. ಅಧ್ಯಕ್ಷ ಸ್ಥಾನ ಪಡೆಯಲು ಬಿಜೆಪಿ ಸಾಕಷ್ಟು ಪ್ರಯತ್ನ ನಡೆಸಿ ವಿಫಲವಾದ ಮೇಲೆ ಸುಮ್ಮನಾಗಿದೆ.

ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅಚ್ಚರಿಯಂತೆ ಶಬನಂ ಆಯ್ಕೆಯಾಗಿದ್ದಾರೆ. ಇಷ್ಟು ದಿನ ಗೀತಾ ರಮೇಶ್ ಅಧ್ಯಕ್ಷರಾಗುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಇನ್ನೂ ಆಪರೇಷನ್ ಕಮಲಕ್ಕೆ ಬೆದರಿದ ಕಾಂಗ್ರೆಸ್ ಕಾರ್ಯಕರ್ತರು ಉತ್ತರ ಕರ್ನಾಟಕ, ಮೈಸೂರು, ಬೆಂಗಳೂರು ಅಂತ ಟೂರ್ ಹೋಗಿ ನಿನ್ನೆ ರಾತ್ರಿ ವಾಪಸ್ ಆಗಿದ್ದರು.

ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಿದ್ದಂತೆಯೇ ಕೆಪಿಸಿಸಿ ವಕ್ತಾರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಮಂಜುನಾಥ ಗೌಡ ಆಗಮಿಸಿ ಶುಭಕೋರಿದ್ದಾರೆ. ಇಬ್ಬರನ್ನೂ ಒಂದೇ ವೇದಿಕೆಯಲ್ಲಿ ಕಂಡು ಕಾರ್ಯಕರ್ತರು ಸಂತಸಗೊಂಡಿದ್ದಾರೆ. ಇತ್ತ ಇಂದಿನ ಚುನಾವಣೆ ಜಿಲ್ಲಾ ಬಿಜೆಪಿಯ ಮಟ್ಟಿಗೆ ಮುಖಭಂಗವೇ ಸರಿ.

ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು