ಹಸಿರು ಪಟಾಕಿ ಮಾರಾಟಕ್ಕೆ ಅದೇಶಿಸಲು ಡಿಸಿಗೆ ಶಶಿಕುಮಾರ್ ಎಸ್ ಗೌಡ ಮನವಿ

 

ವಿಜಯ ಸಂಘರ್ಷ



ಭದ್ರಾವತಿ : ಸರ್ವೋಚ್ಚ ನ್ಯಾಯಾಲ ಯದ 2017 ರ ಆದೇಶದ ಮೇರೆಗೆ ಪಟಾಕಿ ಮಾರಾಟಗಾರರು ಕಡ್ಡಾಯವಾಗಿ ಪರಿಸರ ಪ್ರೇಮಿ ಹಸಿರು ಪಟಾಕಿ ಮಾರಾಟ ಮಾಡಲು ಜಿಲ್ಲಾಧಿಕಾರಿ ಗಳು ಅದೇಶಿಸಬೇಕೆಂದು ಆಗ್ರಹಿಸಿ ಸೋಮವಾರ ಮಿನಿ ವಿಧಾನ ಸೌಧ ಮುಂಭಾಗ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಏಕಾಂಗಿ ಪ್ರತಿಭಟನೆ ನಡೆಸಿದರು.

ಜಿಲ್ಲೆಯಲ್ಲಿ ಕೊರೊನಾ ಸೋಂಕು ಕುಂಠಿತ ಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರ ಅರೋಗ್ಯ ದೃಷ್ಟಿಯಿಂದ ಪಟಾಕಿ ನಿಷೇಧಿಸಿ ಹಸಿರು ಪಟಾಕಿಗಳನ್ನು  ಮಾರಾಟ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಕ್ತ ಆದೇಶ ನೀಡುವಂತೆ ಒತ್ತಾಯಿಸಿದರು.

ಪರಿಸರ ಸ್ನೇಹಿ ಹಸಿರು ಪಟಾಕಿ ಉತ್ಪಾದಿಸುವಂತೆ ಸರ್ವೋಚ್ಚ ನ್ಯಾಯಾಲಯ ಕಟ್ಟುನಿಟ್ಟಿನ ಆದೇಶ ನೀಡಿದ್ದರು ಸಹ ಆದೇಶವನ್ನು ಧಿಕ್ಕರಿಸಿ ನಾಗರೀಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಳೆಯ ಪಟಾಕಿ ಮಾರಾಟ ಮಾಡುತ್ತಿದ್ದಾರೆ. ಈ ಕೂಡಲೇ ಗಮನ ಹರಿಸಿ ಹಳೆಯ ಪಟಾಕಿ ಮಾರಾಟ ಮಾಡದಂತೆ ತಡೆಹಿಡಿಯಲು ಕ್ರಮಕ್ಕೆ ಮುಂದಾಗುವಂತೆ ಮನವಿಯಲ್ಲಿ ಒತ್ತಾಯಿಸಿ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು