ಸಣ್ಣ ಪುಟ್ಟ ವ್ಯಾಪಾರಸ್ಥ ರಿಗೂ ಬದುಕಲು ಅವಕಾಶ ನೀಡಿ: ರವಿಕುಮಾರ್

 

ವಿಜಯ ಸಂಘರ್ಷ



ಭದ್ರಾವತಿ: ನಗರದ ಕಡದಕಟ್ಟೆ ರೈಲ್ವೆ ಗೇಟ್ ಬಳಿ ಮೇಲ್ಸೇತುವೆ ನಿರ್ಮಾಣಕ್ಕೆ ಮುಂದಾಗಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದ್ದು, ಈ ಜಾಗದಲ್ಲಿ ಕಳೆದ ಮೂರು ದಶಕಗಳಿಗೂ ಅಧಿಕ ವರ್ಷಗಳಿಂದ ಸಣ್ಣ ಪುಟ್ಟ ವ್ಯಾಪಾರ ವ್ಯವಹಾರ ನಡೆಸಿಕೊಂಡು ಜೀವನ ಸಾಗಿಸುತ್ತಿರು ವವರನ್ನು ಪ್ರತ್ಯೇಕವಾಗಿ ಪರಿಗಣಿಸಿ ಅವರ ಬೇಡಿಕೆಗಳನ್ನು ಈಡೇರಿಸ ಬೇಕೆಂದು ಒತ್ತಾಯಿಸಿ ತಹಸೀಲ್ದಾರ್ ಆರ್. ಪ್ರದೀಪ್ ಮೂಲಕ ಜಿಲ್ಲಾಧಿಕಾರಿಗಳಿಗೆ ಇಂದು ಮನವಿ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜೂ.6 ರಂದು ನಡೆದ ಸಭೆಯಲ್ಲಿ ಈ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಹಾಗು ಅಂಗಡಿ ಮುಂಗಟ್ಟುಗಳ ವ್ಯಾಪಾರಸ್ಥರಿಗೆ ತೆರವು ಮಾಡುವಂತೆ ಮೌಕಿಕವಾಗಿ ಸೂಚಿಸುವ ಮೂಲಕ ನಿವಾಸಗಳನ್ನು ಹೊಂದಿರುವವರಿಗೆ ಪರಿಹಾರವಾಗಿ 5 ಲಕ್ಷ ರು. ಹಾಗು ಜೇಡಿಕಟ್ಟೆಯಲ್ಲಿ 20*30 ನಿವೇಶನ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ನಡುವೆ ಸಭೆಯಲ್ಲಿ ಪಾಲ್ಗೊಂಡಿದ್ದ ಎಎಪಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ಪ್ರಸ್ತುತ 5 ಲಕ್ಷ ರೂ ವೆಚ್ಚದಲ್ಲಿ ಮನೆಗಳನ್ನು ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ಪರಿಹಾರ ಮೊತ್ತವನ್ನು 10 ಲಕ್ಷ  ರೂ ಗಳಿಗೆ ಹೆಚ್ಚಿಸುವಂತೆ ಮನವಿ ಮಾಡಿದ್ದರು.

ಅಲ್ಲಿ ಕುಲುಮೆ, ಕಟಿಂಗ್ ಶಾಪ್, ಹೋಟೆಲ್, ಚಿಲ್ಲರೆ ಅಂಗಡಿ ಹಾಗು ಜೆರಾಕ್ಸ್ ಅಂಗಡಿ ಸೇರಿದಂತೆ ಮತ್ತಿತರ ವ್ಯಾಪಾರ ವ್ಯವಹಾರ ನಡೆಸಿಕೊಂಡು ಜೀವನ ಸಾಗಿಸುತ್ತಿರುವವರು ಮುಂದೆ ಸಹ ಇದೆ ವೃತ್ತಿಗಳನ್ನು ನಡೆಸಿಕೊಂಡು ಹೋಗುವಂತೆ ಅನುಕೂಲವಾಗುವ ನಿಟ್ಟಿನಲ್ಲಿ ಅವರ ಬೇಡಿಕೆಗಳನ್ನು ಪ್ರತ್ಯೇಕವಾಗಿ ಪರಿಗಣಿಸುವಂತೆ ವಿನಂತಿಸಲಾಗಿತ್ತು.

 ಇದೀಗ ಈ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಎಎಪಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ನೇತೃತ್ವದಲ್ಲಿ ನಿವಾಸಿಗಳು ಮನವಿ ಸಲ್ಲಿಸಿದರು. ಸ್ಥಳೀಯ ವ್ಯಾಪಾರಸ್ಥರು ಇದ್ದರು.

ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು