ವಿಜಯ ಸಂಘರ್ಷ
ಚಾಮರಾಜನಗರ: ಹನೂರು: ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮ ತನು ಮನ ಅರ್ಪಿಸಿ ದೇಶಕ್ಕಾಗಿ ಶ್ರಮಿಸಿದ ಮಹಾತ್ಮ ಗಾಂಧೀಜಿಯವರ ತತ್ವ ಆದರ್ಶ ಇಂದಿನ ಯುವ ಪೀಳಿಗೆಗೆ ಮಾದರಿ ಎಂದು ಪಿ.ಜಿ.ಪಾಳ್ಯ
ಗ್ರಾ.ಪಂ.ಅಧ್ಯಕ್ಷ ಕೃಷ್ಣಮೂರ್ತಿ ತಿಳಿಸಿದರು.
ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ
ಗ್ರಾ.ಪಂ.ಯಲ್ಲಿ ಮಹಾತ್ಮಗಾಂಧೀಜಿ ಯವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಹಿಂಸಾ ತತ್ವದ ಮೂಲಕ ಬ್ರೀಟಿಷ ರನ್ನು ಬಗ್ಗು ಬಡಿದ ಗಾಂಧೀಜಿ ಯವರ ಮನೋಸ್ಥೈರ್ಯ ಮೆಚ್ಚುವಂತದ್ದು, ಅಂತಹ ಮಹನ್ ನಾಯಕರಿಂದ ಭಾರತ ದೇಶ ಪ್ರಪಂಚದ
ಭೂಪಟದಲ್ಲಿ ರಾರಾಜಿಸುವಂತಿದೆ ಎಂದರು.
ಇದೇ ವೇಳೆ ಮಹಾತ್ಮಗಾಂಧಿ ಅವರ ಜನ್ಮ ದಿನಾಚರಣೆ ಅಂಗವಾಗಿ ಪಾಲ್ಗೊಂಡಿದ್ದ ಅಂಗನವಾಡಿ,
ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಮಹಿಳಾ ಸಂಘಗಳ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರೂ
ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕ ಸ್ಥಳಗಳು ಸೇರಿದಂತೆ ಸಮುದಾಯ ಆಧಾರಿತ ಸರ್ಕಾರಿ ಕಛೇರಿಯ ಆವರಣಗಳಲ್ಲಿ ಶುಚಿತ್ವವ
ಕಾರ್ಯವನ್ನು ಕೈಗೊಳ್ಳುವ ದಿಸೆಯಲ್ಲಿ
ಶ್ರಮದಾನ ಮಾಡುವ ಮೂಲಕ ಮಹಾತ್ಮ ಗಾಂಧೀಜಿಯವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಗಮನ
ಸೆಳೆದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಸಿಬ್ಬಂದಿ ಗಳು, ಅಂಗನವಾಡಿ ಕಾರ್ಯಕರ್ತೆ ಯರು ಮತ್ತಿತರರಿದ್ದರು.
ವರದಿ: ಪ್ರಭುಸ್ವಾಮಿ ಎಂ, ಹನೂರು.
ಸುದ್ದಿ & ಜಾಹೀರಾತು ನೀಡಲು ಕರೆ ಮಾಡಿ +91 9743225795