ವಿಜಯ ಸಂಘರ್ಷ
ಭದ್ರಾವತಿ: ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ನಾರಾಯಣ ಗುರು ವಿಚಾರ ವೇದಿಕೆ ಹಾಗೂ ಆರ್ಯ ಈಡಿಗ ಮಹಿಳಾ ವೇದಿಕೆ ವತಿಯಿಂದ ಇಂದು ಹಳೇ ನಗರ ರಂಗಪ್ಪ ವೃತ್ತದಲ್ಲಿ ಇಂದು ಸಂಜೆ ಸಂತಾಪ ಸಭೆ ಹಮ್ಮಿಕೊಳ್ಳಲಾಗಿತ್ತು.
ವರನಟ ದಿವಂಗತ ರಾಜ್‌ಕುಮಾರ್ ರವರ ಪುತ್ರರಾದ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್‌ರವರ ಅಕಾಲಿಕ ನಿಧನ ನಾಡಿನ ಸಮಸ್ತ ಕನ್ನಡಿಗರ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಇವರ ನಿಧನ ಕೇವಲ ಚಿತ್ರರಂಗಕ್ಕೆ ಮಾತ್ರವಲ್ಲದೆ ಕನ್ನಡ ಸಾರಸ್ವತ ಲೋಕಕ್ಕೂ ತುಂಬಲಾರದ ನಷ್ಟವನ್ನುಂಟು ಮಾಡಿದೆ.
ಭಗವಂತ ಇವರ ಆತ್ಮಕ್ಕೆ ಚಿರಶಾಂತಿಯನ್ನು ಹಾಗು ಅಭಿಮಾನಿಗಳಲ್ಲಿ ಮತ್ತು ಕುಟುಂಬ ವರ್ಗದವರಲ್ಲಿ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುವುದಾಗಿ ಸಂತಾಪ ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ವೇದಿಕೆಯ ನಟರಾಜ್, ಕೆ.ಪಿ. ಲಿಂಗೇಶ್, ಕೊಗಲೂರು ತಿಪ್ಪೇಸ್ವಾಮಿ, ವಸಂತ್ ಪೂಜಾರಿ, ಭಾಗ್ಯಮ್ಮ ಮುಂತಾದವರಿದ್ದರು.
ನೋಟಿನ ಮೂಲಕ ಸಂತಾಪ :
ನಗರದ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ ಸಂಗ್ರಹಗಾರ ರಾದ ಗಣೇಶ್‌ರವರು ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್‌ರವರ ನಿಧನಕ್ಕೆ ನೋಟು ಸಂಗ್ರಹದ ಮೂಲಕ ವಿಶಿಷ್ಟವಾಗಿ ಸಂತಾಪ ಸೂಚಿಸಿದ್ದಾರೆ.
ರಾಜಕಾರಣಿಗಳು, ಮಠಾಧೀಶರು, ಚಲನಚಿತ್ರ ನಟರು, ಸಾಹಿತಿಗಳು, ಕವಿ, ಕ್ರೀಡಾಪಟು ಸೇರಿದಂತೆ ಗಣ್ಯ ವ್ಯಕ್ತಿಗಳಿಗೆ ಸಭೆ ಸಮಾರಂಭಗಳಲ್ಲಿ ಅವರ ಜನ್ಮದಿನಾಂಕ ಹೊಂದಿರುವ ನೋಟು ಉಡುಗೊರೆಯಾಗಿ ನೀಡುವ ಮೂಲಕ ಶುಭ ಹಾರೈಸುವ ಹಾಗು ನಿಧನರಾದ ಸಂದರ್ಭದಲ್ಲಿ ಮರಣ ದಿನಾಂಕ ಹೊಂದಿರುವ ನೋಟಿನ ಮೂಲಕ ಸಂತಾಪ ಸೂಚಿಸುವ ಹವ್ಯಾಸ ಬೆಳೆಸಿಕೊಂಡು ಬಂದಿದ್ದಾರೆ.
ನೋಟಿನ ಮೂಲಕ ಸಂತಾಪ :
ನಗರದ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ ಸಂಗ್ರಹಗಾರ ರಾದ ಗಣೇಶ್‌ರವರು ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್‌ರವರ ನಿಧನಕ್ಕೆ ನೋಟು ಸಂಗ್ರಹದ ಮೂಲಕ ವಿಶಿಷ್ಟವಾಗಿ ಸಂತಾಪ ಸೂಚಿಸಿದ್ದಾರೆ.
ರಾಜಕಾರಣಿಗಳು, ಚಲನಚಿತ್ರ ನಟರು, ಸಾಹಿತಿಗಳು, ಕವಿ, ಕ್ರೀಡಾಪಟು ಸೇರಿದಂತೆ ಗಣ್ಯ ವ್ಯಕ್ತಿಗಳಿಗೆ ಸಭೆ ಸಮಾರಂಭಗಳಲ್ಲಿ ಅವರ ಜನ್ಮದಿನಾಂಕ ಹೊಂದಿರುವ ನೋಟು ಉಡುಗೊರೆಯಾಗಿ ನೀಡುವ ಮೂಲಕ ಶುಭ ಹಾರೈಸುವ ಹಾಗು ನಿಧನರಾದ ಸಂದರ್ಭದಲ್ಲಿ ಜನನ ಮತ್ತು ಮರಣ ದಿನಾಂಕ ಹೊಂದಿರುವ ನೋಟಿನ ಮೂಲಕ ಸಂತಾಪ ಸೂಚಿಸುವ ಹವ್ಯಾಸ ಬೆಳೆಸಿಕೊಂಡಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ +91 9743225795