ವಿಜಯ ಸಂಘರ್ಷ
ಭದ್ರಾವತಿ: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ತರೀಕೆರೆ ರಸ್ತೆಯ ಮಹಾತ್ಮಗಾಂಧಿ ವೃತ್ತದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚಿನ ಶುಲ್ಕ ಪಡೆಯುತ್ತಿದ್ದು, ಅಲ್ಲದೆ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆ ಕೈಗೊಳ್ಳಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆ ಯಾಗುತ್ತಿದ್ದು, ವಸತಿ ನಿಲಯಗಳ ಸೌಲಭ್ಯಗಳಿಂದ ವಂಚಿತರಾಗುತ್ತಿ ದ್ದಾರೆಂದು ಆರೋಪಿಸಲಾಯಿತು.
ಗ್ರಾಮಾಂತರ ಭಾಗಗಳಲ್ಲಿ ಸರಿಯಾಗಿ ಬಸ್ ಸೌಲಭ್ಯಗಳಿಲ್ಲದ ಕಾರಣ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು, ಅಗತ್ಯವಿರುವ ವಿದ್ಯಾರ್ಥಿಗಳಿಗೆ ಬಸ್ಪಾಸ್ ವ್ಯವಸ್ಥೆ ಕಲ್ಪಿಸುವುದು ಹಾಗು ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸ ಲಾಗಿದ್ದು, ಇದುವರೆಗೂ ವಿದ್ಯಾರ್ಥಿ ವೇತನ ಮಂಜೂರಾತಿ ಯಾಗಿರುವು ದಿಲ್ಲ. ತಕ್ಷಣ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸು ವಂತೆ ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಅಕಾಶ್, ಮನು, ಪ್ರವೀಣ್, ಅಭಿ, ಗಣೇಶ್, ಸ್ಪೂರ್ತಿ, ಸುಚಿತ್ರ ಇನ್ನಿತರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ +91 9743225795