ಭದ್ರಾವತಿ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ :ಅಧ್ಯಕ್ಷರಾಗಿ ಗೀತಾ ರಾಜಕುಮಾರ್ ಉಪಾಧ್ಯಕ್ಷರಾಗಿ ಚನ್ನಪ್ಪ

 

ವಿಜಯ ಸಂಘರ್ಷ



ಭದ್ರಾವತಿ: ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ.2 ರ ಸದಸ್ಯೆ ಗೀತಾ ರಾಜ್‌ಕುಮಾರ್ ಹಾಗು ಉಪಾಧ್ಯಕ್ಷರಾಗಿ ಚನ್ನಪ್ಪ ಆಯ್ಕೆಯಾಗಿದ್ದಾರೆ.
ಶನಿವಾರ ನಡೆದ ಚುನಾವಣೆಯಲ್ಲಿ ಗೀತಾ ಕೆ.ಜಿ ರಾಜ್‌ಕುಮಾರ್ ಮತ್ತು ಚನ್ನಪ್ಪ ತಲಾ 8 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಗೀತಾ ಕೆ.ಜಿ ರಾಜ್‌ಕುಮಾರ್, ಜೆಡಿಎಸ್ ಪಕ್ಷದಿಂದ ವಾರ್ಡ್ ನಂ.15 ರ ಮಂಜುಳ ಬಿ.ಎಸ್ ಸುಬ್ಬಣ್ಣ ಹಾಗು ಬಿಜೆಪಿ ಪಕ್ಷದಿಂದ ವಾರ್ಡ್ ನಂ.5 ರ ಶಶಿಕಲಾ ಬಿ.ಎಸ್ ನಾರಾಯಣಪ್ಪ ಸ್ಪರ್ಧಿಸಿದ್ದು, ಈ ಪೈಕಿ ಗೀತಾ 20, ಮಂಜುಳ 12 ಮತ್ತು ಶಶಿಕಲಾ 4 ಮತಗಳನ್ನು ಪಡೆದುಕೊಂಡರು.

    ಪರಿಶಿಷ್ಟ ಜಾತಿಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ವಾರ್ಡ್ ನಂ.9ರ ಚನ್ನಪ್ಪ ಮತ್ತು  ಜೆಡಿಎಸ್ ಪಕ್ಷದಿಂದ ವಾರ್ಡ್ ನಂ. 25 ರ ಕೆ. ಉದಯ ಕುಮಾರ್ ಸ್ಪರ್ಧಿಸಿದ್ದು, ಈ ಪೈಕಿ ಚನ್ನಪ್ಪ 20 ಮತಗಳನ್ನು ಹಾಗು ಕೆ. ಉದಯ ಕುಮಾರ್ 12 ಮತಗಳನ್ನು ಪಡೆದುಕೊಂಡರು. ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಪಕ್ಷದ 4 ಸದಸ್ಯರು ತಟಸ್ಥವಾಗಿ ಉಳಿದುಕೊಂಡರು.

ಒಟ್ಟು 34 ಸದಸ್ಯರಿದ್ದು, ಈ ಪೈಕಿ ಶಾಸಕ ಬಿ.ಕೆ ಸಂಗಮೇಶ್ವರ್ 1 ಮತ ಹೊಂದಿದ್ದಾರೆ. ಒಟ್ಟು 36 ಮತಗಳು ಚಲಾವಣೆಗೊಂಡಿವೆ. ನಗರಸಭೆಯಲ್ಲಿ ಕಾಂಗ್ರೆಸ್ 18, ಜೆಡಿಎಸ್ 12, ಬಿಜೆಪಿ 4 ಮತ್ತು 1 ಪಕ್ಷೇತರ ಸದಸ್ಯರಿದ್ದಾರೆ.

ಶಾಸಕ ಬಿ.ಕೆ ಸಂಗಮೇಶ್ವರ್ ಉಪಸ್ಥಿತರಿದ್ದರು. ಚುನಾವಣಾಧಿ ಕಾರಿಯಾಗಿ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಕರ್ತವ್ಯ ನಿರ್ವಹಿಸಿದರು. ಪೌರಾಯುಕ್ತ ಕೆ. ಪರಮೇಶ್ ಇದ್ದರು.

ಸುದ್ದಿ & ಜಾಹೀರಾತು ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು