ವಿವಿಧ ಬೇಡಿಕೆ ಈಡೇರಿಕೆಗೆ ನ.19 ರಂದು ಶಾಂತಿಯುತ ಪ್ರತಿಭಟನೆ

 

ವಿಜಯ ಸಂಘರ್ಷ



ಭದ್ರಾವತಿ: ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸದಿರುವಂತೆ ಹಾಗು ಕ್ರೈಸ್ತ ಪ್ರಾರ್ಥನಾ ಮಂದಿರಗಳ ಮೇಲೆ ನಡೆಯುತ್ತಿರುವ ಅತಿಕ್ರಮ ಪ್ರವೇಶ ಮತ್ತು ಫಾಸ್ಟರ್‌ಗಳ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ.19 ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕು ಕಛೇರಿ ಮುಂಭಾಗ ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಹ್ಯೂಮನ್ ರೈಟ್ಸ್ ವತಿಯಿಂದ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

    ಕ್ರೈಸ್ತ ಸಮುದಾಯದ ಚರ್ಚ್‌ಗಳು ಮತ್ತು ಧಾರ್ಮಿಕ ಸಂಘ-ಸಂಸ್ಥೆಗಳ ಗಣತಿ ನಡೆಸಬೇಕೆಂಬ ಹಿಂದುಳಿದ ವರ್ಗಗಳ ಇಲಾಖೆಯ ಆದೇಶವನ್ನು ಸಹ ತಕ್ಷಣ ಹಿಂಪಡೆಯಬೇಕೆಂದು ಪ್ರತಿಭಟನೆಯಲ್ಲಿ ಆಗ್ರಹಿಸಲಾಗು ವುದು. ಕ್ರೈಸ್ತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರತಿಭಟನೆ ಯಶಸ್ವಿಗೊಳಿಸುವಂತೆ ಹಳೇನಗರದ ವೇಲಾಂಗಣಿ ಆರೋಗ್ಯ ಮಾತೆ ದೇವಾಲಯದ ಧರ್ಮ ಕೇಂದ್ರದ ಗುರು ಫಾದರ್ ಸ್ಟೀವನ್ ಡೇಸಾ ಮತ್ತು ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ಪಾಲನಾ ಪರಿಷತ್ ಕಾರ್ಯದರ್ಶಿ ಅಂತೋಣಿ ವಿಲ್ಸನ್ ಕೋರಿದ್ದಾರೆ.

ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು