ವಿಜಯ ಸಂಘರ್ಷ
ಭದ್ರಾವತಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರ
ಹಳೇನಗರದ ಕನಕಮಂಟಪ ಮೈದಾನದಲ್ಲಿ 66 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ.ಸಂಗಮೇಶ್ವರ್ ಕನ್ನಡ ತಾಯಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದರು.
ಕನ್ನಡ ನಮ್ಮ ಮಾತೃ ಭಾಷೆಯಾಗಿದ್ದು, ಹೆಚ್ಚಿನ ಆದ್ಯತೆ ನೀಡಬೇಕು. ಆಂಗ್ಲ ಭಾಷೆಯ ಮೇಲಿನ ವ್ಯಾಮೋಹ ದಿಂದಾಗಿ ಕನ್ನಡ ಭಾಷೆಯನ್ನು ಸಮೃದ್ಧವಾಗಿ ಕಟ್ಟಿ ಬೆಳೆಸುವಲ್ಲಿ ಅನೇಕ ಮಹನೀಯರು ನಡೆಸಿರುವ ಹೋರಾಟ ವ್ಯರ್ಥವಾಗದಂತೆ ಎಚ್ಚರ ವಹಿಸಬೇಕಾಗಿದೆ. ನಾವು ಯಾವುದೇ ಭಾಷೆಯನ್ನು ವಿರೋಧಿಸಬಾರದು. ಎಲ್ಲಾ ಭಾಷೆಯನ್ನು ಕಲಿಯಬೇಕು. ಆದರೆ ಮೊದಲು ಈ ನಾಡಿನ ಭಾಷೆಯನ್ನು ನಾವುಗಳು ಕಲಿತುಕೊಳ್ಳುವ ಜೊತೆಗೆ ನಮ್ಮ ಮಕ್ಕಳಿಗೂ ಕಲಿಸಬೇಕು. ಆಗ ಮಾತ್ರ ಭವಿಷ್ಯದಲ್ಲಿ ಕನ್ನಡ ಭಾಷೆ ಮತ್ತಷ್ಟು ಸಮೃದ್ಧವಾಗಿ ಬೆಳೆಯಲು ಸಾಧ್ಯ ಎಂದರು.
ತಹಸೀಲ್ದಾರ್ ಆರ್. ಪ್ರದೀಪ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕನ್ನಡ ನಾಡು ಉದಯಿಸಲು ಕಾರಣಕರ್ತರಾದ ಎಲ್ಲಾ ಮಹನೀಯರನ್ನು ಸ್ಮರಿಸುವ ಮೂಲಕ ಪ್ರತಿಯೊಬ್ಬರೂ ನೆಲ, ಜಲ, ಭಾಷೆಯ ಮೇಲಿನ ಅಭಿಮಾನ ಬೆಳೆಸಿಕೊಳ್ಳಬೇಕೆಂದು ಕೆರೆ ನೀಡಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಬಿ.ಎಚ್ ರಸ್ತೆಯ ಅಂಬೇಡ್ಕರ್ ವೃತ್ತದಿಂದ ಹಾಲಪ್ಪವೃತ್ತ, ಮಾಧವಚಾರ್, ರಂಗಪ್ಪ ವೃತ್ತದ ಮೂಲಕ ಕನಕ ಮಂಟಪ ಮೈದಾನದವರೆಗೂ ತಾಯಿ ಶ್ರೀ ಭುವನೇಶ್ವರಿ ದೇವಿ ಮೆರವಣಿಗೆ ನಡೆಯಿತು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸದಸ್ಯರುಗಳು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ ಹಾಗೂ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ +91 9743225795