ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ನಾಳೆ ಪ್ರತಿಭಟನೆ

 

ವಿಜಯ ಸಂಘರ್ಷ



ಭದ್ರಾವತಿ: ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ಮಧ್ಯವರ್ತಿಗಳ ಹಾವಳಿ ಖಂಡಿಸಿ, ರೈತರ ಸಂಕಷ್ಟಕ್ಕೆ ಸ್ಪಂದಿಸದ ಅಧಿಕಾರಿಗಳ ವರ್ತನೆ ವಿರುದ್ಧ ಪ್ರತಿಭಟನೆ ಹಾಗು ಇತ್ತೀಚೆಗೆ ನಿಧನ ಹೊಂದಿದ ಗಣ್ಯರಿಗೆ ಶ್ರದ್ಧಾಂಜಲಿ ಸಭೆ ತಾಲೂಕು ಪಂಚಾಯಿತಿ ಮುಂಭಾಗ ನಾಳೆ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ, ಪ್ರಗತಿಪರ ಚಿಂತಕ ಪ್ರೊ. ಜಿ.ಕೆ ಗೋವಿಂದರಾವ್, ಲೋಕಾಯುಕ್ತ ವೆಂಕಟಾಚಲ ಹಾಗು ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಗುವುದು. ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ಮಧ್ಯವರ್ತಿಗಳ ಹಾವಳಿ ಹಾಗು ಭ್ರಷ್ಟಾಚಾರ ಮಿತಿಮೀರಿದ್ದು, ಅರ್ಹ ಫಲಾನುಭವಿಗಳು ಸೌಲಭ್ಯಗಳನ್ನು ಪಡೆಯಲು ತೊಂದರೆ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಅಲ್ಲದೆ ಗ್ರಾಮದ ರೈತರೊಬ್ಬರಿಗೆ ನ್ಯಾಯಾಲಯದ ಆದೇಶವಿದ್ದರೂ ಸಹ ಪೋಡಿ ಮಾಡಿಕೊಡದೆ ನಿರ್ಲಕ್ಷ್ಯತನದಿಂದ ವರ್ತಿಸುತ್ತಿರುವ ಅಧಿಕಾರಿಗಳ ಕ್ರಮವನ್ನು ಖಂಡಿಸ ಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿ ಗೊಳಿಸುವಂತೆ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಕೋರಿದ್ದಾರೆ.

ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು