ಜಂತುಹುಳು ಬಾಧೆಯಿಂದ ಎಚ್ಚರವಹಿಸಿ: ಡಾ.ಅಶೋಕ್

 

ವಿಜಯ ಸಂಘರ್ಷ



ಭದ್ರಾವತಿ:  ಜಂತುಹುಳುವಿನ ಬಾಧೆಯಿಂದ ಮಕ್ಕಳಲ್ಲಿ ರಕ್ತಹೀನತೆ, ಪೋಷಕಾಂಶದ ಕೊರತೆ, ಹಸಿವಾಗದಿರುವುದು, ನಿಶ್ಯಕ್ತಿ ಮತ್ತು ಆತಂಕ, ಹೊಟ್ಟೆನೋವು, ವಾಕರಿಕೆ, ವಾಂತಿ, ಅತಿಸಾರ, ತೂಕ ಕಡಿಮೆ ಯಾಗುವುದು ಇತ್ಯಾದಿ ರೋಗಲಕ್ಷಣ ಗಳು ಕಾಣಿಸಿಕೊಳ್ಳಲಿವೆ.  ಈ ರೋಗ ಲಕ್ಷಣಗಳನ್ನು ನಿಯಂತ್ರಿಸಲು ಮಕ್ಕಳಿಗೆ ವಯಸ್ಸಿಗೆ ಅನುಗುಣವಾಗಿ ಜಂತುಹುಳು ಮಾತ್ರೆ ನೀಡಲಾಗುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಹೇಳಿದರು.

ಇಂದು ಪೇಪರ್‌ಟೌನ್ ಆಂಗ್ಲ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಂತುಹುಳು ಮಾತ್ರೆ ಸೇವನೆಯಿಂದ ರಕ್ತಹೀನತೆ ನಿಯಂತ್ರಿಸುವ ಜೊತೆಗೆ ಪೋಷಕಾಂಶದ ಸುಧಾರಣೆ ಮತ್ತು ಕಲಿಕೆಯಲ್ಲಿ ಏಕಾಗ್ರತೆ ಉಂಟಾಗುತ್ತದೆ ಎಂದರು.

ಪ್ರಾಂಶುಪಾಲ ಆರ್.ಸತೀಶ್ ಮಾತನಾಡಿ, ಸರ್ಕಾರದಿಂದ ಸಿಗುವ ಜಂತುಹುಳು ಮಾತ್ರೆ ಸದುಪಯೋಗ ಪಡಿಸಿಕೊಂಡು ಆರೋಗ್ಯ ಸುಧಾರಣೆ ಮಾಡಿಕೊಳ್ಳುವ ಜೊತೆಗೆ ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಗಮನಹರಿಸಬೇಕು. ಕುಡಿಯಲು ಶುದ್ಧವಾದ ನೀರು ಬಳಸಬೇಕು. ಆಹಾರ ಸೇವಿಸುವ ಸ್ಥಳದ ಸುತ್ತಮುತ್ತ ಸ್ವಚ್ಛತೆ ಕಾಪಾಡಿ ಕೊಳ್ಳಬೇಕು. ಶೌಚಾಲಯ ಬಳಸಿದ ನಂತರ ಸಾಬೂನಿನಿಂದ ಕೈ ತೊಳೆದು ಕೊಳ್ಳುವುದು ಸೇರಿದಂತೆ ಇತ್ಯಾದಿ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಡಾ. ದತ್ತಾತ್ರೇಯ, ಹಿರಿಯ ಆರೋಗ್ಯ ಸಹಾಯಕಿ ಯರಾದ ರೇವತಿ, ಪ್ರಭಾವತಿ, ಇಂದ್ರ, ಅಂಕಿತ, ಮಮತಾ, ಹೆನ್ರಿ,  ದೈಹಿಕ ಶಿಕ್ಷಕ ಸಿದ್ದಯ್ಯ ಇನ್ನಿತರರಿದ್ದರು.

ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು