ವಿಜಯ ಸಂಘರ್ಷ
ಬೆಂಗಳೂರು: ಪ್ರತಿದಿನ ಬೆಳಿಗ್ಗೆ ವಾಹನಸವಾರರಿಗೆ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯಿಂದಾಗಿ ತಲೆನೋವಾಗಿತ್ತು.
ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರವೂ ಬೆಲೆ ಇಳಿಕೆ ಮಾಡಿರುವುದು ಕೊಂಚ ನೆಮ್ಮದಿ ಸಿಕ್ಕಂತಾಗಿದೆ.
ಕೇಂದ್ರ ಸರ್ಕಾರ ಪೆಟ್ರೋಲ್ ದರ 10 ರೂ.ಹಾಗೂ ಡೀಸಲ್ ದರವನ್ನು 5 ರೂಪಾಯಿ ಕಡಿಮೆ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವು ತೈಲ ಬೆಲೆ ಕಡಿಮೆ ಮಾಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನಿರ್ಧಾರ ಪ್ರಕಟಿಸಿದ್ದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಬಕಾರಿ ತೆರಿಗೆಯ ಜೊತೆಯಲ್ಲಿ ರಾಜ್ಯ ಸರ್ಕಾರವು ಮಾರಾಟ ತೆರಿಗೆಯನ್ನು ಶೇಕಡಾ 35 ರಿಂದ ಶೇಕಡಾ 25.9ಕ್ಕೆ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 24 ರಿಂದ ಶೇಕಡಾ 14.34ಕ್ಕೆ ಇಳಿಸಿವೆ.
ಇದರಿಂದ ನ.3ರಂದು ಇದ್ದ ಪೆಟ್ರೋಲಿನ ಚಿಲ್ಲರೆ ಮಾರಾಟ ದರವು 113.93 ರೂಪಾಯಿಯಿಂದ 100.63 ರೂಪಾಯಿಗೆ ಬಂದಿದ್ದು, ಒಟ್ಟಾರೆ ದರ ಕಡಿತ 13.30 ರೂಪಾಯಿ ಆಗಲಿದೆ. ಇನ್ನು ನ.3 ರಂದು ಇದ್ದ ಡೀಸೆಲ್ ನ ಚಿಲ್ಲರೆ ಮಾರಾಟ ದರವು 104.50 ರೂಪಾಯಿಯಿಂದ 85.03 ರೂಪಾಯಿಗೆ ಇಳಿಕೆ ಆಗಲಿದೆ. ಒಟ್ಟಾರೆ 19.47 ರೂಪಾಯಿ ದರ ಕಡಿತ ಆಗಿದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ +91 9743225795