ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸದಿರಲು ಕ್ರೈಸ್ತ ಸಮುದಾಯದವರಿಂದ ಶಾಂತಿಯುತ ಪ್ರತಿಭಟನೆ: ಮನವಿ

 

ವಿಜಯ ಸಂಘರ್ಷ



ಭದ್ರಾವತಿ: ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸದಿರುವಂತೆ ಹಾಗು ಕ್ರೈಸ್ತ ಸಮುದಾಯದ ಚರ್ಚ್‌ಗಳು ಮತ್ತು ಧಾರ್ಮಿಕ ಸಂಘ-ಸಂಸ್ಥೆಗಳ ಗಣತಿ ನಡೆಸಬೇಕೆಂಬ ಹಿಂದುಳಿದ ವರ್ಗಗಳ ಇಲಾಖೆಯ ಆದೇಶವನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿ ಶುಕ್ರವಾರ ತಾಲೂಕು ಕಛೇರಿ ಮುಂಭಾಗ ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ


ಹ್ಯೂಮನ್ ರೈಟ್ಸ್ ವತಿಯಿಂದ ನಗರದ ವಿವಿಧ ಚರ್ಚ್‌ಗಳ ಧರ್ಮಗುರುಗಳ ನೇತೃತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು ಮಾತನಾಡಿ, ಸರ್ಕಾರ ಯಾವುದೋ ಒಂದೆರೆಡು ಘಟನೆ ಗಳನ್ನು ಆಧಾರವಾಗಿಟ್ಟು ಕೊಂಡು ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಮುಂದಾಗು ತ್ತಿರುವುದನ್ನು ರಾಜ್ಯದ ಸಮಸ್ತ ಕ್ರೈಸ್ತ ಸಮುದಾಯದವರು ವಿರೋಧಿ ಸುತ್ತದೆ. ಸಂವಿಧಾನದಲ್ಲಿ ಯಾವುದೇ ಧರ್ಮ ಆಚರಿಸಲು, ಪ್ರತಿಪಾದಿಸಲು ಹಾಗು ಅದನ್ನು ಪ್ರಕಟಿಸಲು ಹಕ್ಕುಗಳನ್ನು ನೀಡಲಾಗಿದೆ. ಈಗಿರುವಾಗ ಮತಾಂತರ ನಿಷೇಧ ಕಾಯ್ಕೆ ಜಾರಿಗೆ ತರುವುದರಲ್ಲಿ ಯಾವುದೇ ಅರ್ಥವಿಲ್ಲ. ಕೆಲವು ಮತಾಂಧ ಕಿಡಿಗೇಡಿ ಗಳಿಂದ ಸಮಾಜ ದಲ್ಲಿ ಆಶಾಂತಿ ವಾತಾವರಣ ನಿರ್ಮಾಣವಾಗುತ್ತಿದ್ದು, ಈ ನಡುವೆ ವಿನಾಕಾರಣ ರಾಜ್ಯದಲ್ಲಿರುವ ಇಡೀ ಕ್ರೈಸ್ತ ಸಮುದಾಯದವರ ಮೇಲೆ ಮತಾಂತರ ಆರೋಪ ಮಾಡುತ್ತಿರು ವುದು ಸರಿಯಲ್ಲ. ಒಂದು ವೇಳೆ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಲ್ಲಿ ಇದರಿಂದ ಯಾವುದೇ ರೀತಿ ಪ್ರಯೋಜನವಾಗುತ್ತಿಲ್ಲ. ಬದಲಿಗೆ ಈ ಕಾಯ್ದೆಯನ್ನು ಕೋಮುವಾದಿಗಳು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ವೆಸಗಲು ಬಳಸಿಕೊಳ್ಳುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಕಾಯ್ದೆಯನ್ನು ಜಾರಿಗೊಳಿಸದಿರುವಂತೆ ಮನವಿಯಲ್ಲಿ ಒತ್ತಾಯಿಸಿದರು.  

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಳಿ ಈಗಾಗಲೇ ಕ್ರೈಸ್ತ ಸಮುದಾಯ ಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿ ಗಳು ಇವೆ. ಜನಸಂಖ್ಯೆ ಗಣತಿ ನಡೆಸಲು ಯಾವುದೇ ವಿರೋಧವಿಲ್ಲ. ಆದರೆ ಪ್ರತ್ಯೇಕವಾಗಿ ಕ್ರೈಸ್ತ ಸಮುದಾಯದ ಚರ್ಚ್‌ಗಳು ಮತ್ತು ಧಾರ್ಮಿಕ ಸಂಘ-ಸಂಸ್ಥೆಗಳ ಗಣತಿ ನಡೆಸಬೇಕೆಂಬ ಉದ್ದೇಶ ಸರಿಯಲ್ಲ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಳಿ ಇರುವ ಜನಗಣತಿ ಅಂಕಿ ಅಂಶಗಳನ್ನು ಗಮನಿಸಿದಾಗ ದೇಶ ಹಾಗು ರಾಜ್ಯದಲ್ಲಿ ಕ್ರೈಸ್ತ ಸಮುದಾಯದವರು ಸ್ವಾತಂತ್ರ್ಯ ಪೂರ್ವದಿಂದಲೂ ಇಲ್ಲಿಯವರೆಗೂ ಯಾವುದೇ ರೀತಿಯ ವ್ಯತ್ಯಾಸಗಳು ಕಂಡು ಬರುತ್ತಿಲ್ಲ. ಒಂದು ವೇಳೆ ಮತಾಂತರ ನಡೆದಿದ್ದಲ್ಲಿ ಕ್ರೈಸ್ತರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿತ್ತು. ಇದನ್ನು ಗಮನಿಸಿ ದಾಗ ವಾಸ್ತವಾಂಶ ತಿಳಿದು ಬರುತ್ತದೆ. ಅಲ್ಲದೆ ದೇಶದಲ್ಲಿ, ರಾಜ್ಯದಲ್ಲಿ ಕ್ರೈಸ್ತ ಸಮುದಾಯಕ್ಕೆ ಸೇರಿದ ಲಕ್ಷಾಂತರ ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು ಹಾಗು ಸ್ವಯಂ ಸೇವಾ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಮತಾಂತರದ ಬಗ್ಗೆ ಇದುವರೆಗೂ ಇವುಗಳಿಂದ ಸೇವೆ ಪಡೆಯುತ್ತಿರುವ ಯಾರೊಬ್ಬರ   ಆರೋಪಗಳು ಸಹ ಇರುವುದಿಲ್ಲ. ಈಗಿರುವಾಗ ಪ್ರತ್ಯೇಕವಾಗಿ  ಕ್ರೈಸ್ತ ಸಮುದಾಯದ ಚರ್ಚ್‌ಗಳು ಮತ್ತು ಧಾರ್ಮಿಕ ಸಂಘ-ಸಂಸ್ಥೆಗಳ ಗಣತಿ ನಡೆಸಬೇಕೆಂಬ ಉದ್ದೇಶ ಸರಿಯಲ್ಲ. ಈ ಹಿನ್ನಲೆಯಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಆದೇಶವನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿದರು.

ನಗರಸಭಾ ಸದಸ್ಯ ಜಾರ್ಜ್, ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ಧರ್ಮಗುರು ಫಾ. ಲಾನ್ಸಿ ಡಿಸೋಜ, ಹಳೇನಗರದ ವೇಲಾಂಗಣಿ ಆರೋಗ್ಯ ಮಾತೆ ದೇವಾಲಯದ ಧರ್ಮ ಗುರು ಫಾ. ಸ್ಟೀವನ್ ಡೇಸಾ, ಹಿರಿಯೂರು ಧರ್ಮ ಕೇಂದ್ರದ ಫಾ. ಸಂತೋಷ್ ಪಿರೇರಾ, ಮಾವಿನಕೆರೆ ಧರ್ಮ ಕೇಂದ್ರದ ಫಾ. ವೀನಸ್, ಪಾಸ್ಟರ್ ಎಸ್. ದೇವನೇಸನ್ ಸ್ಯಾಮುವೆಲ್, ಅಮಲೋದ್ಭವಿ ಮಾತೆ ದೇವಾಲಯದ ಪಾಲನಾ ಪರಿಷತ್ ಕಾರ್ಯದರ್ಶಿ ಅಂತೋಣಿ ವಿಲ್ಸನ್, ಗಾಂಧಿನಗರ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಅಂತೋಣಿ, ಯುನೈಟೆಡ್ ಕ್ರಿಶ್ವಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್, ನಗರಸಭಾ ಮಾಜಿ ಸದಸ್ಯ ಪ್ರಾನ್ಸಿಸ್, ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಭಾಸ್ಕರ್ ಬಾಬು, ವಿವಿಧ ಚರ್ಚ್‌ಗಳ ಪಾಸ್ಟರ್ ಗಳು, ಸಮುದಾಯದ ವಿವಿಧ ಸಂಘಟನೆ ಗಳ ಪ್ರಮುಖರು, ಮಹಿಳಾ ಮುಖಂಡರು ಮತ್ತಿತರರು ಪಾಲ್ಗೊಂಡಿದ್ದರು.

ತಹಸೀಲ್ದಾರ್ ಗ್ರೇಡ್-2 ರಂಗಮ್ಮ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.

ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು