ವಿಜಯ ಸಂಘರ್ಷ
ಭದ್ರಾವತಿ: ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಂದ ನಡೆಯಲಿರುವ ಚುನಾವಣೆ ಅಂಗವಾಗಿ ಇಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷೆ
ಪವಿತ್ರ ರಾಮಯ್ಯ ನೇತೃತ್ವದಲ್ಲಿ ಮತಯಾಚನೆ ನಡೆಸಿದರು.
ತಾಲ್ಲೂಕಿನ ಕೂಡ್ಲಿಗೆರೆ ಮಹಾ ಶಕ್ತಿ ಕೇಂದ್ರ ವ್ಯಾಪ್ತಿಯ ಕೂಡ್ಲಿಗೆರೆ, ವೀರಾಪುರ, ಕಾಗೆ ಕೊಡಮಗ್ಗಿ, ಆತ್ತಿಗುಂದ, ನಾಗತಿ ಬೆಳಗಲು, ಅರಳಿಹಳ್ಳಿ, ಕೋಮಾರನಹಳ್ಳಿ ಗ್ರಾಮ ಪಂಚಾಯತಿ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ರಾಮ ಮಟ್ಟದ ಯೋಜನೆಗಳನ್ನು ಸಮರ್ಪಕವಾಗಿ ಶ್ರೀ ಸಾಮಾನ್ಯನಿಗೆ ತಲುಪಿಸಿ ಆರ್ಥಿಕ ಸಬಲರನ್ನಾಗಿಸಲು, ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳನ್ನು ಮಾದರಿಯಾಗಿ ಅಭಿವೃದ್ದಿ ಪಡಿಸಲು, ಪ್ರತಿಯೊಬ್ಬ ಸದಸ್ಯರಿಗೆ ಸರ್ಕಾರದ ಸವಲತ್ತುಗಳನ್ನು ಮುಟ್ಟಿಸುವ ಮೂಲಕ ಸಾಮಾಜಿಕ ಬದ್ಧತೆ ಕಲ್ಪಿಸಲು, ನೂತನ ವಿನೂತನ ಯೋಜನೆಗಳನ್ನು ಜಾರಿಗೆ ತರಲು, ಗ್ರಾಮ ಮಟ್ಟದಲ್ಲಿ ತಾಂತ್ರಿಕ ಮೂಲಭೂತ ಸೌಕರ್ಯದ ಮುಖಾಂತರ ಆನ್ಲೈನ್ ಸೇವೆ ಸಿಗುವಂತಾಗಲು, ಸ್ವಚ್ಛತೆ ಹಾಗೂ ಗ್ರಾಮೀಣ ಶಿಕ್ಷಣಕ್ಕೆ ಪ್ರಥಮ ಆದ್ಯತೆ ಹಾಗೂ ಮುಂತಾದ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿ, ಮುಂಬರುವ ಚುನಾವಣೆಯಲ್ಲಿ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಸದಸ್ಯರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ರುದ್ರೇಗೌಡ, ಗ್ರಾಪಂ ಸದಸ್ಯ ರುದ್ರೇಶ್, ಮುಖಂಡ ಕೂಡ್ಲಿಗೆರೆ ಹಾಲೇಶ್,ಮಂಡಲ ಅಧ್ಯಕ್ಷ ಪ್ರಭಾಕರ್ ಮತ್ತಿತರರು ಉಪಸ್ಥಿತ ರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ +91 9743225795