ಎಚ್ಎಎಲ್ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

 

ವಿಜಯ ಸಂಘರ್ಷ



ಶಿವಮೊಗ್ಗ:ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್(ಹೆಚ್‍ಎಎಲ್), ಬೆಂಗಳೂರು ಇವರು ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗಾಗಿ ಒಂದು ವರ್ಷದ ಅಪ್ರೆಂಟಿಷಿಪ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದ್ದಾರೆ.
ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಓಪಿಎ, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್ ಈ ಟ್ರೇಡ್‍ಗಳಿಗೆ ಅಪ್ರೆಂಟಿಷಿಪ್ ತರಬೇತಿ ನೀಡಲಾಗುವುದು.
ಅಭ್ಯರ್ಥಿಗಳು ಅರ್ಜಿಯೊಂದಿಗೆ ಎಸ್‍ಎಸ್‍ಎಲ್ ಮತ್ತು ಐಟಿಐ ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಆಧಾರ್ ಮತ್ತು ಪಾನ್ ಕಾರ್ಡ್, ಎನ್‍ಸಿವಿಟಿ ಪೋರ್ಟಲ್ ರಿಜಿಸ್ಟ್ರೇಷನ್ ಸಂಖ್ಯೆ ಮತ್ತು ಎಂಪ್ಲಾಯ್‍ಮೆಂಟ್ ಕಾರ್ಡ್ ಈ ಎಲ್ಲ ದಾಖಲೆಗಳನ್ನು ಮೂಲ ಪ್ರತಿ ಹಾಗೂ 2 ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪಾನಗರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಡಿಸೆಂಬರ್ 28 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿ ಮತ್ತು ಅರ್ಜಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ದೂರವಾಣಿ ಸಂಖ್ಯೆ 08182-255293, 9482023412, 9535312531 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ  +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು