ಮಾದಕ ವಸ್ತುಗಳ ಸೇವನೆ ವಿರುದ್ಧ ಜನಜಾಗೃತಿ ಮೂಡಿಸುವ ಸಲುವಾಗಿ ಸೈಕಲ್ ಜಾಥಾ

 


ವಿಜಯ ಸಂಘರ್ಷ



ಭದ್ರಾವತಿ: ಪೋಲಿಸ್ ಇಲಾಖೆ ಮತ್ತು ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಶುಕ್ರವಾರ ಮಾದಕ ವಸ್ತುಗಳ ಸೇವನೆ ವಿರುದ್ಧ ಜನಜಾಗೃತಿ ಮೂಡಿಸುವ ಸಲುವಾಗಿ ಸೈಕಲ್ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಜಾಥಾವು ಹೊಸಮನೆ ಶಿವಾಜಿ ವೃತ್ತದಿಂದ ಸೀಗೆಬಾಗಿ, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ, ಅಂಡರ್ ಬ್ರಿಡ್ಜ್ ನಿಂದ ಪುನಹ  ರಂಗಪ್ಪ ವೃತ್ತದಲ್ಲಿ ಕೊನೆಗೊಂಡಿತು.

ಎಎಸ್ ಪಿ ಜೀತೇಂದ್ರ ಕುಮಾರ್, ಪ್ರಭಾರ ಡಿವೈಎಸ್ ಪಿ ಗಜಾನನ ಸುತಾರಾ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್ ಡಾ. ಬಿ. ಜಿ. ಧನಂಜಯ,ಪೋಲೀಸ್ ಇನ್ಸ್ ಪೆಕ್ಟರ್ ರಾಘವೇಂದ್ರ ಕಾಂಡಿಕೆ, ಮಂಜುನಾಥ್, ಚೈತನ್ಯ,  ಸಬ್ ಇನ್ಸ್ ಪೆಕ್ಟರ್ ಶಾಂತಲಾ, ಸಿಬ್ಬಂದಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ  +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು