ವಿಜಯಸಂಘರ್ಷ /ಭದ್ರಾವತಿ
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳ್ಳದ ಅಧಿಕೃತವಾಗಿ ಉದ್ಘಾಟನೆ ಮಾಡದ ಭವನದಲ್ಲಿ
ಮೇ:24 ರಂದು ಖಾಸಗಿ ಕಾರ್ಯಕ್ರಮ ನಡೆಸಿ ಕಾನೂನು ಉಲ್ಲಂಘನೆ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ. ಎನ್. ರಾಜು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ದಲಿತ ಚಳುವಳಿ ಹುಟ್ಟಿದ ಕ್ಷೇತ್ರದಲ್ಲಿ ವಿಶ್ವಮಾನವ ಡಾ: ಬಿ.ಆರ್ ಅಂಬೇಡ್ಕರ್ ರವರನ್ನು ಗೌರವಿಸಲು ಹಳೇನಗರ ಕನಕ ಮಂಟಪದ ಮುಂಭಾಗ ಬಿ.ಇ.ಓ ಕಛೇರಿಯ ಪಕ್ಕದಲ್ಲಿ 2017 ರಲ್ಲಿ ಅಂಬೇಡ್ಕರ್ ಭವನದ ಕಾಮಗಾರಿ ಅಂದಿನ ಶಾಸಕ ಎಮ್.ಜೆ.ಅಪ್ಪಾಜಿ ಶಂಕು ಸ್ಥಾಪನೆ ನೆರವೇರಿಸಿದ್ದರು.
ಕಾಮಗಾರಿ ಪೂರ್ಣಗೊಳ್ಳಲು ಸುಮಾರು 1.5 ಕೋಟಿ ಬೇಕಿದೆ. ಬಾಕಿ ಇರುವ ಹಣ ಬಿಡುಗಡೆ ಮಾಡದೇ ಕಾಮಗಾರಿಗೂ ನೆನೆಗುದಿಗೆ ಬಿದ್ದಿದ್ದರು, ಭವನದಲ್ಲಿ ಸಿದ್ದಗಂಗಾ ಮಠದ ಸ್ವಾಮೀಜಿಯವರ 115 ನೇ ಜಯಂತಿಯನ್ನು ವೀರಶೈವ ಸಮಾಜದ ವತಿಯಿಂದ ಅದ್ದೂರಿಯಾಗಿ ಕಾರ್ಯಕ್ರವನ್ನು ನಡೆಸಿದ್ದು ಉದ್ಘಾಟನೆಗೊಳ್ಳದ ಕಾಮಗಾರಿಯೂ ಪೂರ್ಣವಾಗದ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ನಡೆಸುವುದು ಕಾನೂನು ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್ ರವರು ಭಾಗವಹಿಸಿದ್ದು ಅವರ ಸ್ಥಾನಕ್ಕೆ ಅಗೌರವ ತೋರಿಸಿದಂತಾಗಿದೆ. ಭವನದ ಉಸ್ತುವಾರಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳು ಕಾಮಗಾರಿಯು ಪೂರ್ಣಗೊಳ್ಳದೇ ಕಾರ್ಯಕ್ರಮವನ್ನು ನಡೆಸಲು ಅನುಮತಿಯ ಮೇರೆಗೆ ನಡೆಸಿದ್ದಾರೆ. ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಗೋಪಿನಾಥ್ ಹಾಗೂ ನಿರ್ಮಿತಿ ಕೇಂದ್ರದ ಗುತ್ತಿಗೆದಾರ ನಾಗರಾಜ್ ರವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಡಿಸಿ ರವರಿಗೆ ನೀಡಿದ ಮನವಿಯಲ್ಲಿ ಅಗ್ರಹಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ
+91 9743225795