ವಿಜಯ ಸಂಘರ್ಷ/ಭದ್ರಾವತಿ
ಭದ್ರಾವತಿ : ನಗರದ ಬಿ.ಎಚ್ ರಸ್ತೆ ಮತ್ತು ಬೈಪಾಸ್ ರಸ್ತೆ ಡಾಬಾ ಎದುರಿನ ಬಿಳಿಕಿ ವೃತ್ತಕ್ಕೆ ಈಗಾಗಲೇ ನಾಡಪ್ರಭು ಕೆಂಪೇಗೌಡರ ಹೆಸರನ್ನು ನಾಮಕರಣಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಈ ಪ್ರಕ್ರಿಯೆ ಯನ್ನು ಹಿಂಪಡೆಯಬಾರದು. ಯಾವುದೇ ಹೊಸ ಹೆಸರನ್ನು ಅನುಮೋದಿಸಬಾರದು ಎಂದು ಆಗ್ರಹಿಸಿ ಬುಧವಾರ ನಗರಸಭೆ ಪೌರಾಯುಕ್ತ ಮನುಕುಮಾರ್ ಅವರಿಗೆ ತಾಲೂಕು ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ.
ಈ ಹಿಂದೆ ನಗರಸಭೆ ಆಡಳಿತಕ್ಕೆ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡರ ಹೆಸರನ್ನು ನಾಮಕರಣ ಗೊಳಿಸುವಂತೆ ಮನವಿ ಸಲ್ಲಿಸಲಾಗಿ ತ್ತು. ಜನವರಿ 2016ರಂದು ಸಾಮಾನ್ಯಸಭೆಯಲ್ಲಿ ಅನುಮೋದನೆ ಸಹ ಪಡೆಯಲಾಗಿದೆ. 2019ರಲ್ಲಿ ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ ಇಲ್ಲದಿರುವ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿಗಳಿಂದ ಅನುಮತಿ ಸಹ ಪಡೆಯಲಾಗಿರುತ್ತದೆ. ಹೆಸರನ್ನು ನಾಮಕರಣಗೊಳಿಸುವ ಪ್ರಕ್ರಿಯೆ ಇದೀಗ ಸರ್ಕಾರದ ಮಟ್ಟದಲ್ಲಿದೆ. ಇದೀಗ ಈ ವೃತ್ತಕ್ಕೆ ಬೇರೆಂದು ಹೆಸರನ್ನು ನಾಮಕರಣ ಗೊಳಿಸುವಂತೆ ನಗರಸಭೆ ಸಾಮಾನ್ಯ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ನಾಡಪ್ರಭು ಕೆಂಪೇಗೌಡರ ಹೆಸರನ್ನು ನಾಮಕರಣ ಗೊಳಿಸುವ ಪ್ರಕ್ರಿಯೆಯಿಂದ ಹಿಂದೆ ಸರಿಯಬಾರದು ಎಂದು ಆಗ್ರಹಿಸ ಲಾಗಿದೆ.
ಸಂಘದ ಅಧ್ಯಕ್ಷ ಎ ಟಿ ರವಿ ನೇತೃತ್ವ ದಲ್ಲಿ ಮನವಿ ಸಲ್ಲಿಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಪ್ರಕಾಶ್, ಖಜಾಂಚಿ ಎ.ಎನ್ ಕಾರ್ತಿಕ್, ನಂಜುಂಡೇಗೌಡ, ಕೃಷ್ಣೇಗೌಡ, ಉಮೇಶ್ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ
+91 9743225795